
ಪ್ರಗತಿವಾಹಿನಿ ಸುದ್ದಿ: ಗೂಡ್ಸ್ ಆಟೋಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಅಮಿನ್ ಯರಗಟ್ಟಿ (45) ಮೃತ ವ್ಯಕ್ತಿ. ಆಟೋದಲ್ಲಿ ತರಕಾರಿ ತುಂಬಿಕೊಂಡು ಬೆಳಗಾವಿ ನಗರಕ್ಕೆ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕೆಳಗಡೆ ಬಿದ್ದ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಾರಿಯೂ ರಸ್ತೆ ಪಕ್ಕ ಉರುಳಿ ಬಿದ್ದಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ