*ಬೆಳಗಾವಿಯ ತೌಂದಿ ಘಾಟ್ ನಲ್ಲಿ 8 ವಾಹನಗಳ ಮಧ್ಯೆ ಭೀಕರ ಅಪಘಾತ: ನಾಲ್ವರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ಬಳಿ ನಡೆದಿದೆ
ಕಂಟೇನರ್ ವಾಹನದ ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಕಂಟೇನರ್ ಮೂರು ಕಾರು, ಎರಡು ಲಾರಿ, ಒಂದು ಕಂಟೇನರ್ ಹಾಗೂ ಬೈಕ್‌ಗೆ ಗುದ್ದಿದ ಪರಿಣಾಮ ಒಬ್ಬ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಚಿಕಿತ್ಸೆಗೆ ಕೊಲ್ಹಾಪುದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡವರಿಗೆ ನಿಪ್ಪಾಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ