
ಪ್ರಗತಿವಾಹಿನಿ ಸುದ್ದಿ: ಲಾರಿ- ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೆಟ್ ದಿನ್ನೇ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ಕೋಲಾರ ಮೂಲದವರು ಎಂದು ಗುರುತ್ತಿಸಲಾಗಿದೆ. ಮೃತ ವ್ಯಕ್ತಿಗಳನ್ನು ರಾಜೀಯಾ ಶಾಹಿನ್(50) ಹಾಗೂ ಮೇಹಿಮುದುಲ್ (43), ಮ್ಲೋಲ್ಲಾನಾ ಶಾಹನ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕೋಲಾರದಿಂದ ಪೆನುಗೊಂಡ ದರ್ಗಾಗೆ ಪ್ರಯಾಣಿಸುತ್ತಿದ್ದ ವೇಳೆ ಟಾಟಾ ಸುಮೋ ಹಾಗೂ ಲಾರಿ ನಡುವೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಯಿಂದಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇನ್ನುಳಿದ ನಾಲ್ಕು ಜನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ಕೂಡ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಅಪಘಾತಕ್ಕೀಡಾದವರು ಬಿಹಾರ ಮೂಲದವರಾಗಿದ್ದು, ಕೋಲಾರದ ದರ್ಗಾದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಕುಟುಂಬ ಸಮೇತರಾಗಿ ಕೋಲಾರದಿಂದ ಪೆನುಗೊಂಡ ಕಡೆಗೆ ಪ್ರಯಾಣಿಸುತ್ತಿದ್ದರು. ಅವರ ಸಂತಸಯಾತ್ರೆ ದುರಂತದ ವಾಸ್ತವವಾಗಿ ಪರಿವರ್ತನೆಯಾಗಿದೆ. ಇನ್ನೂ ದುರ್ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳೀಯ ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ