Latest

ಭೀಕರ ಅಪಘಾತ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಬಲಿ

ಪ್ರಗತಿವಾಹಿನಿ ಸುದ್ದಿ, ರಾಯಚೂರು – ಇಲ್ಲಿಗೆ ಸಮೀಪದ ಮಂಜರ್ಲಾ ಎಂಬಲ್ಲಿ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಅಭಿಷೇಕ್, ಗಣೇಶ, ಬಸವರಾಜ ಮೃತರು. ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ಇನ್ನೂ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button