ಪ್ರಗತಿವಾಹಿನಿ ಸುದ್ದಿ: ಬಸ್ ಮತ್ತು ವ್ಯಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಟ್ಟು 17 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಒಟ್ಟು 16 ಜನರು ಗಾಯಗೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ನಿನ್ನೆ ಸಂಜೆ 6.30 ರ ಸುಮಾರಿಗೆ ರಸ್ತೆಮಾರ್ಗದ ಬಸ್ ಮತ್ತು ಮ್ಯಾಜಿಕ್ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದೆ, ಮೃತ ದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ, ಈ ಘಟನೆಯಲ್ಲಿ ಒಟ್ಟು 17 ಜನ ಸಾವನ್ನಪ್ಪಿದ್ದಾರೆ. 7 ಮಹಿಳೆಯರು, 4 ಪುರುಷರು ಮತ್ತು 6 ಮಕ್ಕಳು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ನಿಪುನ್ ಅಗರ್ವಾಲ್ ತಿಳಿಸಿದ್ದಾರೆ.
ಹತ್ರಾಸ್ ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಸಂತ್ರಸ್ತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ