Kannada NewsKarnataka News

*ಭೀಕರ ರಸ್ತೆ ಅಪಘಾತ: ಮರದಲ್ಲಿ ನೇತಾಡಿದ ಶವ *

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.‌

ಅಪಘಾತದ ರಭಸಕ್ಕೆ ಕಾರು ಕಾಲುವೆಗೆ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರ ಶವ ಮರದಲ್ಲಿ ನೇತಾಡುತ್ತಿದ್ದು ಇದನ್ನು ನೋಡಿದ ಜನ  ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಪರಿಣಾಮ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ ಎನ್ನಲಾಗಿದೆ.  ಮೃತಪಟ್ಟವರನ್ನು ಬೆಸ್ಕಾಂ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಈ ಅಪಘಾತ ನಿನ್ನೆ ರಾತ್ರಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿದೆ. ಕಾರಿನಲ್ಲಿ ನಾಲ್ವರು ಇದ್ದು ಮೂವರು ಮೃತಪಟ್ಟಿದ್ದಾರೆ.

Home add -Advt

ಕೆಪಿಟಿಸಿಎಲ್ ನ ವೇಣುಗೋಪಾಲ್( 34), ಶ್ರೀಧರ್ (35), ಬೆಸ್ಕಾಂ ಲೈನ್ ಮ್ಯಾನ್ ಮಂಜಪ್ಪ (35)ಎಂದು ಗುರುತಿಸಲಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button