
ಪ್ರಗತಿವಾಹಿನಿ ಸುದ್ದಿ: ಕಳಶ ಯಾತ್ರೆಯ ವೇಳೆ ಭೀಕರ ಕಾಲ್ತುಳಿತ ಸಂಭವಿಸಿದ್ದು, ಓರ್ವ ಭಕ್ತ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯಾರ್‌ನಲ್ಲಿ ನಡೆದಿದೆ.
ಗ್ವಾಲಿಯಾರ್‌ನಲ್ಲಿ ಆಯೋಜಿಸಲಾಗಿದ್ದ ಈ ಕಳಶ ಯಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಸೇರಿದ್ದರು. ಭಾರಿ ಜನಸಂದಣಿಯ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ದುರಂತಕ್ಕೆ ಕಾರಣವಾಗಿದೆ.
ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.




