National

*ಭೀಕರ ದುರಂತ 7 ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಆಟೋ ರಿಕ್ಷಾಗೆ ಟ್ರಕ್ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ದುರಂತ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ದುರ್ಘಟನೆ ದಮೋಹನ ಸಮಣ್ಣ ಗ್ರಾಮದ ಮುಂಭಾಗದ ಬಂದಕ್‌ಪುರ ರಸ್ತೆಯಲ್ಲಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇನ್ನೂ ಐವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Home add -Advt

ಭೀಕರ ಅಪಘಾತವನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬುಲ್ಲೋಜರ್ ಸಹಾಯದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತಪಟ್ಟವರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ.

ಆರೋಪಿ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ವಿರುದ್ಧ ದೇಹತ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಹನದ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Related Articles

Back to top button