National

*ಪಾಕಿಸ್ತಾನ ಜೊತೆ ನಂಟು: ಉಗ್ರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ : ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್‌ಐ ಜತೆ ನಂಟು ಹೊಂದಿರುವ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ ಸಂಘಟನೆಯ ಉಗ್ರನನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಪಂಜಾಬ್‌ನ ಅಮೃತಸರ ಜಿಲ್ಲೆಯ ರಾಮದಾಸ್ ಪ್ರದೇಶದ ಕುರ್ಲಿಯನ್ ಗ್ರಾಮದ ನಿವಾಸಿ ಲಜರ್ ಮಸಿಹ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪಂಜಾಬ್ ಪೊಲೀಸರು ಮತ್ತು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಗುರುವಾರ ನಸುಕಿನ ಜಾವ 3.20 ರ ಸುಮಾರಿಗೆ ಕೌಶಂಬಿಯಲ್ಲಿ ಬಂಧಿಸಲಾಗಿದೆ.

ಬಂಧಿತ ಉಗ್ರ, ಜರ್ಮನಿ ಮೂಲದ ಖಾಲ್ಪಾ ಇಂಟರ್‌ನ್ಯಾಷನಲ್ ಸಂಘಟನೆಯ ಮುಖ್ಯಸ್ಥ ಸ್ವರ್ಣ ಸಿಂಗ್ ಅಲಿಯಾಸ್ ಜೀವನ್ ಫೌಜಿ ಎನ್ನುವವನಿಗೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೆ ಪಾಕಿಸ್ತಾನದ ಐಎಸ್‌ಐ ಕಾರ್ಯಕರ್ತರೊಂದಿಗೆ ನೇರ ಸಂಪರ್ಕದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತ ಭಯೋತ್ಪಾದಕನನ್ನು ಎಸ್‌ಟಿಎಫ್ ಅಧಿಕಾರಿಗಳು ಭಯೋತ್ಪಾದಕನಿಂದ ಸ್ಪೋಟಕ ವಸ್ತುಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, 3 ಸಕ್ರಿಯ ಹ್ಯಾಂಡ್‌ ಗ್ರೆನೇಡ್‌ಗಳು, 2 ಸಕ್ರಿಯ ಡಿಟೋನೇಟರ್‌ಗಳು, ಒಂದು ವಿದೇಶಿ ನಿರ್ಮಿತ ಪಿಸ್ತೂಲ್ ಮತ್ತು 13 ಜೀವಂತ ಗುಂಡುಗಳು ವಶಪಡಿಸಿಕೊಳ್ಳಲಾಗಿದೆ.

Home add -Advt

ಪೊಲೀಸ್ ವರದಿಯ ಪ್ರಕಾರ, ಅರೋಪಿಯಿಂದ ಗಾಜಿಯಾಬಾದ್ ವಿಳಾಸ ಹೊಂದಿರುವ ಆಧಾರ್ ಕಾರ್ಡ್, ಸಿಮ್ ಕಾರ್ಡ್ ಇಲ್ಲದ ಒಂದು ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button