
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇದೇ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಪಠ್ಯ ಪರಿಷ್ಕರಣೆ ಇನ್ಮುಂದೆ ಜನರಿಂದಲೇ ನಿರ್ಧರಿಸಲಾಗುವುದು. ಪಠ್ಯ ಪರಿಷ್ಕರಣೆ ಸಂಬಂಧ 2 ನಿರ್ಧಾರ ಕೈಗೊಂಡಿದ್ದೇವೆ ಎಂದರು.
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು. ಹಿಂದಿನ ಪಠ್ಯ ಪುಸ್ತಕ ಸಮಿತಿ ಪಠ್ಯಕ್ಕೆ ಕತ್ತರಿ ಹಾಕಿದ್ದು ಸರಿಯೋ? ನಾವು ಮಾಡಿದ್ದು ಸರಿಯೋ? ಎಂಬುದನ್ನು ಜನರೇ ನಿರ್ಧಾರ ಮಾಡಲಿ ಎಂದು ಹೇಳಿದ್ದಾರೆ.
ಪ್ರಸ್ತುತ ಪಠ್ಯ ಪುಸ್ತಕದಲ್ಲಿ ದೋಷಗಳಾಗಿದ್ದರೆ ಮಾಹಿತಿ ನೀಡಿದಲ್ಲಿ ಅದನ್ನು ಸರಿಪಡಿಸಲಾಗುವುದು. ಈ ಬಗ್ಗೆ ಈ ಹಿಂದೆಯೇ ಸಿಎಂ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ