ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಠ್ಯ ಪುಸ್ತಕ ಪರೀಷ್ಕರಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕನ್ನಡದಲ್ಲಿ 6ರಿಂದ 10 ನೇತರಗತಿಯ ಪಠ್ಯದಲ್ಲಿ ಹಲವು ಬದಲಾವಣೆ ಮಾಡಲಾಗುವುದು. ಸಮಾಜ ವಿಜ್ಞಾನ ವಿಷಯದಲ್ಲಿ ಕೆಲ ಬದಲಾವಣೆಗೆ ತೀರ್ಮಾನಿಸಲಾಗಿದೆ ಎಂದರು.
ಮಕ್ಕಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾವರ್ಕರ್ ಪಾಠ, ಹೆಗ್ಡೆವಾರ್ ಪಾಠ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ಕೈಬಿಡಲು ಸರ್ಕಾರ ನಿರ್ಧರಿಸಿದ್ದು, ಈಬಾರಿ ಸಾವಿತ್ರಿ ಬಾಯಿ ಪುಲೆ ಅವರ ನೀ ಹೋದ ಮರುದಿನ ಪಾಠ ಸೇರಿಸಲಾಗುತ್ತಿದೆ. ಅಲ್ಲದೇ ಅಂಬೇಡ್ಕರ್ ಅವರ ಕವನ, ಪುತ್ರಿ ಇಂದಿರಾಗೆ ನೆಹರು ಬರೆದ ಪತ್ರ, ನೀ ಬರೆದ ಪತ್ರವನ್ನು ಸೇರ್ಪಡೆ ಮಾಡಲಾಗುತ್ತಿದೆ. ಶೀಘ್ರದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ