9ನೇ ತರಗತಿ ಪಠ್ಯ ಪುಸ್ತಕದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ; ಬೆಳಗಾವಿಯಲ್ಲಿ ಲಿಂಗಾಯತ ಮಹಾಸಭಾ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಠ್ಯ ಪುಸ್ತಕ ಪರೀಷ್ಕರಣೆ ವಿವಾದ ತಾರಕಕ್ಕೇರಿದ್ದು, 9ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರ ಬಗ್ಗೆ ನೀಡಲಾಗಿರುವ ತಪ್ಪು ಮಾಹಿತಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಪ್ರತಿಭಟನೆ ನಡೆಸಿತು.
ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ್ ರೊಟ್ಟಿ ಹಾಗೂ ವಿವಿಧ ಮಾಠಾಧೀಶರ ನೇತೃತ್ವದಲ್ಲಿ, ಜಿಲ್ಲಾಧಿಕಾರಿ ಕಚೇರಿ ಎದುರು ಲಿಂಗಾಯಿತ ಮಹಾಸಭಾ ಹಾಗೂ ರಾಷ್ಟ್ರೀಯ ಬಸವ ಸೇನೆ ಸದಸ್ಯರು ಪ್ರತಿಭಟನೆ ನಡೆಸಿದ್ದು, ಒಂದು ವಾರದಲ್ಲಿ ಪಠ್ಯ ಪುಸ್ತಕದಲ್ಲಿರುವ ದೋಷ ಸರಿಪಡಿಸಿ ಹೊಸ ಪುಸ್ತಕ ಹಂಚಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಬಸವಣ್ಣನವರ ತತ್ವಾಷಯಗಳಿಗೇ ವಿರುದ್ಧವಾಗಿ ಪಠ್ಯ ಪುಸ್ತಕದಲ್ಲಿ ಬದಲಾವಣೆ ಮಾಡಲಾಗಿರುವುದು ಖಂಡನೀಯ. ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹಾಗೂ ರಾಜ್ಯ ಸರ್ಕಾರದ ಬೇಜವಾಬ್ದಾರಿ ಇದಾಗಿದೆ. ವಾರದೊಳಗೆ ತಪ್ಪು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ತೋಂಟದ ಸಿದ್ಧರಾಮ ಸ್ವಾಮಿಗಳು, ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮಿಗಳು, ರುದ್ರಾಕ್ಷಿ ಮಠದ ಅಲ್ಲಮಪ್ರಭು ಸ್ವಾಮಿಗಳು ಸೇರಿದಂತೆ ಹಲವು ಮಠಾಧೀಶರು ಇದ್ದರು.
ಎತ್ತಿಕೊಂಡು ಹೋದ ಕಲಾಕೃತಿಗಳಿಗೆ ದುಡ್ಡು ಕೊಡಿ : ಅಧ್ಯಕ್ಷ ರಾಘವೇಂದ್ರ ಶೆಟ್ಟಿಗೇ ನೋಟೀಸ್ ಕೊಟ್ಟ ಎಂಡಿ ರೂಪಾ
ರೂಪಾ ಅವರಿಗೆ 75 ಬಾರಿ ನಾನು ನೋಟೀಸ್ ನೀಡಿದ್ದೇನೆ; ಬೇಳೂರು ರಾಘವೇಂದ್ರ ಶೆಟ್ಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ