Latest

ಮಾಸ್ಕ್ ಧರಿಸದಿದ್ದರೆ ಬೀಳುತ್ತೆ 48 ಸಾವಿರ ರೂಪಾಯಿ ದಂಡ

ಪ್ರಗತಿವಾಹಿನಿ ಸುದ್ದಿ; ಬ್ಯಾಂಕಾಕ್: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುವ ಜನರಿಗೆ ಇದೀಗ 48,000 ರೂಪಾಯಿ ದಂಡ ವಿಧಿಸಿರುವ ಘಟನೆ ಥೈಲ್ಯಾಂಡ್ ನಲ್ಲಿ ಬೆಳಕಿಗೆ ಬಂದಿದೆ.

ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಥೈಲ್ಯಾಂಡ್ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡಿದ್ದು, ಅದರಲ್ಲೂ ಥೈಲ್ಯಾಂಡ್ ನ 9 ಪ್ರಾಂತ್ಯಗಳಲ್ಲಿ ಮಾಸ್ಕ್ ಧರಿಸದೇ ಓಡಾಟ ನಡೆಸುವವರಿಗೆ 640 ಡಾಲರ್ ಅದರೆ ಸುಮಾರು 48,000 ರೂ ದಂಡ ವಿಧಿಸಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ಥೈಲ್ಯಾಂಡ್ ನಲ್ಲಿ 2000ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗುತ್ತಿದ್ದು, ಕೋವಿಡ್ ನಿಯಮ ಉಲ್ಲಂಘನೆ ಮಾಡುವ ನಾಗರಿಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಅಲ್ಲಿನ ಸರ್ಕಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button