ಪ್ರಗತಿವಾಹಿನಿ ಸುದ್ದಿ: ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.
ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯನ್ಸ್ ಇರಲಿದೆ.
ರಾಜ್ಯದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಲಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಬಹುದು. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಪ್ರಮಾಣದ ಮಳೆ ಸುರಿಯಲಿದೆ. ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇರುತ್ತದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ