Kannada NewsLatest

ರೈತರ ಅಭ್ಯುದಯವೇ ಬಿಜೆಪಿ ಸರ್ಕಾರದ ಗುರಿ

ರೈತರ ಅಭ್ಯುದಯವೇ ಬಿಜೆಪಿ ಸರ್ಕಾರದ ಗುರಿ : ಗುರುಪಾದ ಕಳ್ಳಿ

ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ಗೋಕಾಕ : ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಸ್ಥಿರ ಹಾಗೂ ಪಾರದರ್ಶಕ ಆಡಳಿತ ನೀಡಲಿದ್ದು, ಸಿಎಂ ಯಡಿಯೂರಪ್ಪನವರು ರೈತರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದ್ದಾರೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರುಪಾದ ಕಳ್ಳಿ ಹೇಳಿದರು.

ಬುಧವಾರದಂದು ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅರಭಾವಿ ಮಂಡಲ ಬಿಜೆಪಿ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ವಿಸ್ತಾರಕರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ಇರುವುದರಿಂದ ರಾಜ್ಯಕ್ಕೆ ವರದಾನವಾಗಲಿದೆ ಎಂದು ಹೇಳಿದರು.

ಬಿಜೆಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಕೊಳ್ಳಬೇಕು. ಅಗಸ್ಟ್ 5 ರೊಳಗೆ ಈ ಪ್ರಕ್ರಿಯೆ ಮುಗಿಸಬೇಕು. ಅರಭಾವಿ ಮಂಡಲ ರಾಜ್ಯದಲ್ಲಿಯೇ ಅತೀ ಹೆಚ್ಚಿನ ಸದಸ್ಯರನ್ನು ಮಾಡಿರುವ ಕೀರ್ತಿಗೆ ಪಾತ್ರವಾಗಿದೆ. ಈಗ ನಡೆಯುತ್ತಿರುವ ಸಂಘಟನಾ ಪರ್ವ ಸದಸ್ಯತಾ ಅಭಿಯಾನವನ್ನು ಕೂಡ ಯಶಸ್ವಿಗೊಳಿಸುವಂತೆ ಕೋರಿದರು.

ಕೇಂದ್ರದಲ್ಲಿ ಸುರೇಶ ಅಂಗಡಿ ಅವರು ಸಚಿವರಾಗಿದ್ದಾರೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತಂದುಕೊಡಲಿದ್ದಾರೆ ಎಂದು ಹೇಳಿದರು.

ಬಾಲಚಂದ್ರ ಜಾರಕಿಹೊಳಿ ಪವರ್‌ಫುಲ್ : ಅರಭಾವಿ ಕ್ಷೇತ್ರದಲ್ಲಿ ಬಿಜೆಪಿಯನ್ನು ಬೇರು ಮಟ್ಟದಿಂದ ಸಂಘಟಿಸಿದ ಕೀರ್ತಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲ್ಲುತ್ತದೆ. ಪಕ್ಷವು ಹಮ್ಮಿಕೊಳ್ಳುತ್ತಿರುವ ಎಲ್ಲ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಒಂದೂವರೆ ದಶಕದಿಂದ ಹಗಲಿರುಳು ಶ್ರಮಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಪವರ್‌ಫುಲ್ ರಾಜಕಾರಣಿಯಾಗಿದ್ದಾರೆ. ಇಷ್ಟರಲ್ಲಿಯೇ ನಡೆಯಲಿರುವ ಸಂಪುಟ ವಿಸ್ತರಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸ್ಥಾನ ನೀಡುವಂತೆ ವರಿಷ್ಠರನ್ನು ಕೋರಿದರು.

ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ವಹಿಸಿದ್ದರು. ಜಿಪಂ ಸದಸ್ಯ ಗೋವಿಂದ ಕೊಪ್ಪದ, ಜಿಲ್ಲಾ ಇನ್ನೊರ್ವ ಪ್ರಧಾನ ಕಾರ್ಯದರ್ಶಿ ಗೂಳಪ್ಪ ಹೊಸಮನಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಹಿಡಕಲ್ ಡ್ಯಾಂ ಘಯೋನೀಬ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅಪ್ಪಯ್ಯ ಬಡ್ನಿಂಗಗೋಳ, ಯುವ ಧುರೀಣ ನಾಗಪ್ಪ ಶೇಖರಗೋಳ, ಎಪಿಎಂಸಿ ಮಾಜಿ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ, ಪ್ರಭಾಶುಗರ ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ನಿರ್ದೇಶಕರಾದ ಕೃಷ್ಣಪ್ಪ ಬಂಡ್ರೊಳ್ಳಿ, ಕೆಂಚಗೌಡ ಪಾಟೀಲ, ಭೂತಪ್ಪ ಗೊಡೇರ, ಎಂ.ಆರ್. ಭೋವಿ, ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ರಾಜು ಬೈರುಗೋಳ, ಎನ್‌ಎಸ್‌ಎಫ್ ಅತಿಥಿ ಗೃಹದ ನಿಂಗಪ್ಪ ಕುರಬೇಟ, ಲಕ್ಕಪ್ಪ ಲೋಕುರಿ, ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅರಭಾವಿ ಮಂಡಲ ಸದಸ್ಯತ್ವ ಅಭಿಯಾನದ ಪ್ರಮುಖ ಬಸವರಾಜ ಮಾಳೇದವರ ಪ್ರಾಸ್ತಾವಿಕವಾಗಿ ಮಾತನಾಡಿದರು.////

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button