Latest

ಮೂರಂತಸ್ತಿನ ಕಟ್ಟಡಲ್ಲಿ ಬಾಂಬ್ ಸ್ಫೋಟ; 10 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಮೂರು ಅಂತಸ್ತಿನ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ಬಾಗಲಪುರದ ತತಾರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಳಿಗ್ಗೆ ಏಕಾಏಕಿ ತೀವ್ರ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಛಿದ್ರ ಛಿದ್ರಗೊಂಡಿದೆ. ಮನೆಯಲ್ಲಿ ಬಾಂಬ್ ತಯಾರಿಸಲಾಗುತ್ತಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ವೇಳೆ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ.

ದುರ್ಘಟನೆಯಲ್ಲಿ 10 ಜನರು ಮೃತಪಟ್ಟಿದ್ದು, 18 ಜನ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಮತ್ತೋರ್ವ ಭಾರತೀಯ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ

Related Articles

Back to top button