ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ 45 ಜನರ ಪಾರ್ಥಿವ ಶರೀರ ಭಾರತಕ್ಕೆ ರವಾನೆ
ಪ್ರಗತಿವಾಹಿನಿ ಸುದ್ದಿ: ಕುವೈತ್ನಲ್ಲಿ ಅಗ್ನಿ ದುರಂತದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ವಿಶೇಷ ಐಎಎಫ್ ವಿಮಾನವು ಕೊಚ್ಚಿಗೆ ಹಾರಿದೆ.
ಅಗ್ನಿ ದುರಂತದಲ್ಲಿ ಗಾಯಗೊಂಡ ಭಾರತೀಯರಿಗೆ ಚಿಕಿತ್ಸೆ ಒದಗಿಸುವ ಹಾಗೂ ಮೃತದೇಹಗಳನ್ನು ತ್ವರಿತವಾಗಿ ಭಾರತಕ್ಕೆ ತರುವ ಕಾರ್ಯದ ಮೇಲ್ವಿಚಾರಣೆಗೆ ವಿದೇಶಾಂಗ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ಗುರುವಾರ ಕುವೈತ್ ತಲುಪಿದ್ದರು.
ಮೃತದೇಹಗಳ ಡಿಎನ್‌ಎ ಪರೀಕ್ಷೆಯನ್ನು ಕುವೈತ್‌ನ ಅಧಿಕಾರಿಗಳು ನಡೆಸಿದ್ದು, ಭಾರತೀಯರ ಮೃತದೇಹಗಳನ್ನು ಹೊತ್ತು ಭಾರತೀಯ ವಾಯುಪಡೆಯ ವಿಮಾನ ಕುವೈತ್‌ನಿಂದ ಭಾರತಕ್ಕೆ ಬರುತ್ತಿದೆ.
ಕುವೈತ್‌ನಲ್ಲಿ ನಡೆದ ಅಗ್ನಿ ಅನಾಹುತದಲ್ಲಿ 45 ಜನ ಭಾರತೀಯರು ಸಾವನ್ನಪ್ಪಿದ್ದಾರೆ. ಅಗ್ನಿ ಅನಾಹುತದಲ್ಲಿ ಮೃತಪಟ್ಟ ಕೇರಳದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಏಳು ಮಂದಿಗೆ ಕುವೈತ್‌ನ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ