
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಬೆಳಗಾವಿ ಮತ್ತು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ ವಿಶೇಷ ವಿಮಾನದ ಮೂಲಕ 10.45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ ಬೆಳಗಾವಿಯ ಶಗುನ್ ಗಾರ್ಡನ್ ನಲ್ಲಿ ನಡೆಯಲಿರುವ ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಮಗಳ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ 11.30ಕ್ಕೆ ಅದೇ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ ಡಾ.ಪಾಟೀಲ ಪುಟ್ಟಪ್ಪ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ. ಅಲ್ಲಿಂದ 1 ಗಂಟೆಗೆ ಅವರು ಬೆಂಗಳೂರಿಗೆ ತೆರಳುವರು.
ಈ ಮೊದಲು ಅವರ ಪ್ರವಾಸ ನಿಗದಿಯಾಗಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿತ್ತು. ಈಗ ಪುನಃ ಅವರ ಪ್ರವಾಸ ನಿಗದಿಯಾಗಿದೆ. ಆದರೆ ಅವರು ಪಾಲ್ಗೊಳ್ಳಬೇಕಿದ್ದ ಇತರ ಕಾರ್ಯಕ್ರಮಗಳೆಲ್ಲ ರದ್ದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ