Kannada NewsKarnataka News

*ಸೇತುವೆಯಿಂದ ಹೊಳೆಗೆ ಬಿದ್ದ ಕಾರು”

ಪ್ರಗತಿವಾಹಿನಿ ಸುದ್ದಿ: ಕಾಸರಗೋಡು ಜಿಲ್ಲೆಯ ಪಳ್ಳಂಜಿರ ಪಾಂಡಿ ರಸ್ತೆಯ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ರಸ್ತೆ ಕಾಣದೇ ಕಾರೊಂದು ಸೇತುವೆಯಿಂದ ಹೊಳೆಗೆ ಬಿದ್ದಿರುವ ಘಟನೆ ನಡೆದಿದೆ. 

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ತಡೆ ಬೇಲಿ ಇಲ್ಲದ ಕಾರಣ ಕಾರೊಂದು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ. ಕಾರಿನಲ್ಲಿ ರಶಿದ್ ಹಾಗೂ ತಷ್ರೀಫ್ ಎಂಬ ಇಬ್ಬರು ಯುವಕರು ಪ್ರಯಾಣಿಸುತ್ತಿದ್ದು,  ಕಾರು ಹೊಳೆಗೆ ಬಿದ್ದ ಕೂಡಲೇ  ಕಾರಿನಿಂದ ಹೊರ ಬಂದು ಮರದ ಗೆಲ್ಲು ಹಿಡಿದು ಆಶ್ರಯ ಪಡೆದಿದ್ದರು.

ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯರ ಸಹಾಯದಿಂದ ಯುವಕರನ್ನು ರಕ್ಷಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button