Kannada NewsLatestNational

ನಾಯಿಮರಿಗೆ ನಾಮಕರಣ ಪ್ರಕರಣ; ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಕುರಾನ್‌ ಗ್ರಂಥದಲ್ಲಿ ಸ್ಥಾನ ಪಡೆದಿರುವ ಹೆಸರನ್ನು ತಮ್ಮ ನಾಯಿ ಮರಿಗೆ ಇಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲಾ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. 

ಎಐಎಂಐಎಂ ವಕ್ತಾರ ಮೊಹಮ್ಮದ್ ಫರ್ಹಾನ್ ಅವರು ತಮ್ಮ ವಕೀಲ ಅಮ್ಜದ್ ಅಲಿ ಮೂಲಕ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ದೂರು ಸಲ್ಲಿಸಿದ್ದಾರೆ.

ಅಕ್ಟೋಬರ್ 4ರಂದು ವಿಶ್ವ ಪ್ರಾಣಿ ದಿನದಂದು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಯವರಿಗೆ ನಾಯಿಮರಿಯೊಂದನ್ನು ಉಡುಗೊರೆಯಾಗಿ ನೀಡಿದ್ದರು. ಆ ನಾಯಿಗೆ ‘ನೂರಿ’ ಎಂದು ಹೆಸರಿಟ್ಟಿದ್ದರು. ಅಷ್ಟೇ ಅಲ್ಲದೆ ನಾಯಿಮರಿ ಫೋಟೊವನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಹೆಸರು ಪ್ರವಾದಿ ಮಹಮ್ಮದ್ ರೊಂದಿಗೆ ಸಂಬಂಧ ಹೊಂದಿರುವುದರಿಂದ ಅದನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಅನೇಕ ಮಸೀದಿಗಳಿಗೂ ನೂರಿ ಮಸ್ಜಿದ್ ಎಂಬ ಹೆಸರು ಇರಿಸಲಾಗಿದೆ. ಆದರೆ ಆ ಹೆಸರನ್ನು ರಾಹುಲ್ ನಾಯಿಮರಿಗೆ ಇರಿಸಿರುವುದು ಮುಸ್ಲಿಂ ಸಮುದಾಯದ ಭಾವನೆಗೆ ಧಕ್ಕೆ ತಂದಿದೆ ಎಂದು ಮೊಹಮ್ಮದ್ ಫರ್ಹಾನ್ ದೂರಿನಲ್ಲಿ ತಿಳಿಸಿದ್ದಾರೆ.

ದೂರುದಾರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನವೆಂಬರ್ 8 ರಂದು ದಿನಾಂಕವನ್ನು ನಿಗದಿಪಡಿಸಿದ್ದಾರೆ ಎಂದು ಫರ್ಹಾನ್ ಅವರ ವಕೀಲ ಅಲಿ ಹೇಳಿದ್ದಾರೆ.

ಇದೀಗ ರಾಹುಲ್ ವಿರುದ್ಧ ದೂರು ನೀಡಿರುವ ಫರ್ಹಾನ್ ಅವರ ವಿರುದ್ಧವೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮೂರು ತಿಂಗಳ ಹಿಂದೆ ಎಫ್‌ಐಆರ್ ದಾಖಲಾಗಿತ್ತು. ಆದರೆ ಫರ್ಹಾನ್ ಬಂಧನಕ್ಕೆ ತಡೆ ನೀಡಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button