ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಹೆಚ್ಚಿನ ಪರಿಹಾರ ಕೊಡಬೇಕು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಕಳೆದ ಮೂರು ದಿನಗಳಿಂದ ಜ್ವರ ಬಂದು ಚಿಕಿತ್ಸೆ ಪಡೆಯುತ್ತಿದ್ದೆ. ಮಾಧ್ಯಮಗಳಲ್ಲಿ ನೋಡಿ ರಾತ್ರಿ ತೀರ್ಮಾನ ಮಾಡಿ ಪ್ರವಾಹ ಪರಿಶೀಲನೆಗೆ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು. ಮಧುರೈದಿಂದ ಹತ್ತು ಸಾವಿರ ಬೆಡ್ ಶಿಟ್ ತರಿಸಿ ಸಹಾಯ ನೀಡುತ್ತೇನೆ. ಎಂದೂ ಕೇಳದ ರೀತಿಯಲ್ಲಿ ಈ ಬಾರಿ ಹಾನಿ ಆಗುತ್ತಿದೆ. ಬೆಳೆ ಹಾನಿ ಸೇರಿದಂತೆ ಜೀವ ಹಾನಿ ದೊಡ್ಡ ಮಟ್ಟದಲ್ಲಿ ಆಗುತ್ತಿದೆ. ಇದಕ್ಕೆ ಸರ್ಕಾರ ಹೆಚ್ಚು ಪರಿಹಾರ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.
ಇವತ್ತು ಇರುವ ರಾಜಕೀಯ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಆಹಾರ ಧಾನ್ಯ ಅವಶ್ಯಕತೆ ಇದ್ದರ ನಾನು ಸಹಾಯ ಮಾಡುತ್ತೇನೆ. ಸರ್ಕಾರ ಕೆಲಸ ಮಾಡುತ್ತಿದೆ, ಈಗ ನಾನು ರಾಜಕೀಯ ಬೆರೆಸುವುದಿಲ್ಲ. ಸಿಎಂ ಯಡಿಯೂರಪ್ಪ ಅವರ ಮೇಲೆ ಹೊಣೆ ಇದೆ. ಅಧಿಕಾರಿಗಳ ಮುಖಾಂತರ ಕೆಲಸ ಮಾಡಿಸಿಕೊಳ್ಳಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಇಂತಹ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ಯಡ್ಯೂರಪ್ಪಗೆ ವಯಸ್ಸಿನ ಸಮಸ್ಯೆಗಳು ಇರಬಹುದು. ಅವರಿಗೆ ಸಚಿವ ಸಂಪುಟ ಇಲ್ಲ. ಸರ್ಕಾರದಲ್ಲಿ ಮುಖ್ಯ ಕಾರ್ಯದರ್ಶಿಗಳು ಮತ್ತು ನುರಿತ ಉತ್ತಮ ಅಧಿಕಾರಿಗಳಿದ್ದಾರೆ. ಅವರಿಂದ ಮಾಹಿತಿ ಪಡೆದು ಕೂಡಲೇ ಸ್ಪಂದಿಸುವ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ