
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ 1,01,603 ಕೋಟಿ ರೂ. ಹೆಚ್ಚುವರಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ.
ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ.
ಅಕ್ಟೋಬರ್ 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಜೊತೆಗೆ ಹೆಚ್ಚುವರಿಯಾಗಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.