LatestNational

ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ: ಇಬ್ಬರು ಪೊಲೀಸರ ವಶಕ್ಕೆ

ಪ್ರಗತಿವಾಹಿನಿ ಸುದ್ದಿ, ಮುಂಬೈ: ಮಹಾರಾಷ್ಟ್ರದ ಎನ್ ಸಿಪಿ ನಾಯಕ, ಅಜಿತ್ ಪವಾರ್ ಬಣದ ಬಾಬಾ ಸಿದ್ದಿಕಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಶನಿವಾರ ರಾತ್ರಿ 9.15ರ ಹೊತ್ತಿಗೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಮಗನ ಕಚೇರಿ ಬಳಿಯೇ ಅವರ ಮೇಲೆ ಮೂವರು ಗುಂಡಿಕ್ಕಿದ್ದಾರೆ. ತಕ್ಷಣ ಅವರನ್ನು ತಕ್ಷಣ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.

Home add -Advt

ಬಾಬಾ ಸಿದ್ದಿಕ್ಕಿ ಕಾಂಗ್ರೆಸ್ ತೊರೆದು ಅಜಿತ್ ಪವಾರ್ ಎನ್‌ಸಿಪಿ ಬಣ ಸೇರಿಕೊಂಡಿದ್ದರು. ಇಂದು(ಅ.12) ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಸಿದ್ದಿಕಿ ದೇಹ ಹೊಕ್ಕಿರುವ ಮೂರು ಗುಂಡುಗಳ ಪೈಕಿ ಒಂದು ಗುಂಡು ಸಿದ್ದಿಕಿ ಎದೆಯ ಭಾಗ ಹೊಕ್ಕಿದೆ. ಹೀಗಾಗಿ ಸಿದ್ದಿಕ್ಕಿ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಸಿದ್ದಿಕಿ ಮೇಲೆ ಗುಂಡು ಹಾರಿಸಿದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀರು ಬಂಧಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಆದರೆ ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ.

ಬಾಂದ್ರಾ ಬಾಯ್ ಎಂದೂ ಕರೆಯಲ್ಪಡುವ ಸಿದ್ದಿಕ್ ಬಾಲಿವುಡ್ ನಟರಾದ ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರ ಆಪ್ತ ಸ್ನೇಹಿತರಾಗಿದ್ದರು. ಬಾಬಾ ಸಿದ್ದಿಕ್ ಅವರು 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಮತ್ತು ಎಫ್‌ಡಿಎ ರಾಜ್ಯ ಸಚಿವರಾಗಿದ್ದರು. ಈ ವರ್ಷದ ಫೆಬ್ರವರಿಯಲ್ಲಿ, ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ನಂತರ ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.

Related Articles

Back to top button