Belagavi NewsBelgaum NewsKannada NewsKarnataka News

*ನಾಳೆ ಸಿಎಂ ಕಾರ್ಯಕ್ರಮಕ್ಕೆ ಬರುವವರು ಈ ಸ್ಥಳದಲ್ಲಿ ವಾಹನ ಪಾರ್ಕ್ ಮಾಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ ಹಾಗೂ ಶಿಲಾನ್ಯಾಸವನ್ನು ಶನಿವಾರ ಸಿಎಂ ಸಿದ್ದರಾಮಯ್ಯ ರವರು ನೆರವೇರಿಸಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.‌

ಈ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ವಾಹನಗಳ ನಿಲುಗಡೆಗಾಗಿ ಸರದಾರ ಮೈದಾನದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ. ಕಾರಣ ಸದರಿ ಕಾರ್ಯಕ್ರಮಕ್ಕೆ ಬರತಕ್ಕಂತಹ ಸಾರ್ವಜನಿಕರು ತಮ್ಮ ವಾಹನಗಳನ್ನು ಸರದಾರ ಮೈದಾನದಲ್ಲಿ ನಿಲುಗಡೆ ಮಾಡಿ ಕಾರ್ಯಕ್ರಮವು ವ್ಯವಸ್ಥಿತವಾಗಿ ನಡೆಯಲು ಹಾಗೂ ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಬೆಳಗಾವಿ ನಗರ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಪ್ರಕಟಣೆ ಹೊರಡಿಸಿದ್ದಾರೆ.‌

Home add -Advt

Related Articles

Back to top button