ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸರಕಾರದ ವಿವಿಧ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸರಕಾರ ಚಿಂತನೆ ನಡೆಸಿದೆ ಎನ್ನುವ ಕೆಲವು ಮಾಧ್ಯಮಗಳ ವರದಿಗೆ ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.
ಈ ಕುರಿತು ಮುಖ್ಯಮಂತ್ರಿಗಳ ಕಚೇರಿ ನೀಡಿರುವ ಸ್ಪಷ್ಟನೆ ಹೀಗಿದೆ:
*ಮತ್ತೊಂದು ಹೊಸ ಸುಳ್ಳಿಗೆ ಸ್ಪಷ್ಟನೆ*
ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ