ಮುಖ್ಯಮಂತ್ರಿ ಯಾರು ಆಗಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತಿರ್ಮಾನ ಮಾಡುತ್ತದೆ – ಜಮೀರ್ ಖಾನ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಯಾರು ಆಗಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತಿರ್ಮಾನ ಮಾಡುತ್ತದೆ. ನನ್ನ ವೈಯಕ್ತಿ ಅಭಿಪ್ರಾಯ ನಾನು ಸಿದ್ದರಾಮಯ್ಯ ಆಗಬೇಕು ಎಂದು ಹೇಳಿದ್ದೇನೆ. ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಎಲ್ಲರೂ 2023ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಜನರೆ ಹೇಳುತ್ತಿದ್ದಾರೆ. ನಾನು ಪ್ರವಾಸ ಮಾಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಸರಕಾರದಲ್ಲಿ ನೀಡಿದ ಯೋಜನೆಯ ಬಗ್ಗೆ ಜನ ನೆನೆಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಟ್ಟಿ ಬೆಳೆಸಬೇಕಿದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕೆಂದು ಹೇಳಿಕೆ ನೀಡಿದ್ದಾರೆ. ಆದರೆ ವೈಯಕ್ತಿಕವಾಗಿ ನನ್ನ ಹೆಸರು ಡಿ.ಕೆ.ಶಿವಕುಮಾರ ಹೇಳಿಲ್ಲ. ಎಲ್ಲರೂ ಸೇರಿ ಪಕ್ಷ ಕಟ್ಟೋಣ ಎಂದಿದ್ದಾರೆ. ಡಿ.ಕೆ.ಶಿವಕುಮಾರ ಲೇವಲ್ ದೊಡ್ಡದಿರಬಹುದು. ನನ್ನ ಲೇವಲ್ ಚಿಕ್ಕದಿರಬಹುದು. ಅವರೇ ದೊಡ್ಡವರಾಗಲಿ ಎಂದರು.
ಮುಖ್ಯಮಂತ್ರಿ ಯಾರು ಆಗಬೇಕೆಂದು ನಮ್ಮ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಿರ್ಣಯ ಮಾಡುತ್ತಾರೆ. ಮುಖ್ಯಮಂತ್ರಿ ಯಾರು ಆಗಬೇಕೆಂದು, ಒಕ್ಕಲಿಗರು ಆಗಬೇಕೆಂದು ಹೇಳಿ ಚಾಲನೆ ಕೊಟ್ಟವರೇ ಡಿ.ಕೆ.ಶಿವಕುಮಾರ. ಮುಸ್ಲಿಂರಿಗೂ ಆಸೆ ಇದೆ. ಅವರ ಸಮುದಾಯದವರು ಮುಖ್ಯಮಂತ್ರಿ ಆಗಬೇಕೆಂದು ಅದರಂತೆ ನಾನು ಸಹ ನನ್ನ ವೈಯಕ್ತಿ ಅಭಿಪ್ರಾಯ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಹೇಳಿದ್ದೇನೆ ಎಂದರು.
ಡಿ.ಕೆ.ಶಿವಕುಮಾರ ನಮ್ಮ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಅವರನ್ನು ಭೇಟಿಯಾಗುತ್ತೇನೆ. ಇಲ್ಲ ಅಂದರೆ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲ್ ಭೇಟಿಯಾಗೋಕೆ ಆಗುತ್ತಾ ಎಂದು ಸುದ್ದಿಗಾರರ ಪ್ರಶ್ನೆಗೆ ಮರು ಪ್ರಶ್ನಿಸಿದರು.
ಸಿದ್ದರಾಮಯ್ಯ ಅಮೃತ ಮಹೋತ್ಸವ ಎಲ್ಲ ಅವರ ಅಭಿಮಾನಿಗಳು ಸೇರಿಕೊಂಡು ಆಚರಿಸುತ್ತಿದ್ದೇವೆ. ಕಳೆದ ಆರು ತಿಂಗಳಿನಿಂದ ಸಿದ್ದರಾಮಯ್ಯನವರಿಗೆ ಅಭಿಮಾನಿಗಳು ಒತ್ತಡ ಹಾಕಿದ್ದರು. ಆದ್ದರಿಂದ ಆ.3 ರಂದು ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಆಚರಣೆಯನ್ನು ದಾವಣಗೆರೆಯಲ್ಲಿ ಮಾಡುತ್ತಿದ್ದೇವೆ ಎಂದರು.
ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ; ಶಾಸಕ ಜಮೀರ್ ಗೆ ಡಿಕೆಶಿ ವಾರ್ನಿಂಗ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ