Belagavi NewsBelgaum News

*ಸಂವಿಧಾನದಿಂದ ಎಲ್ಲರಿಗೂ ಶಿಕ್ಷಣ ಹಾಗೂ ಸೌಲಭ್ಯಗಳು ಸಿಗುತ್ತಿವೆ: ಆಸೀಫ್ ಸೇಠ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಂವಿಧಾನದಿಂದ ಎಲ್ಲ ಜನರಿಗೆ ಶಿಕ್ಷಣ ಹಾಗೂ ಸೌಲಭ್ಯಗಳು ಸಿಗುತ್ತಿದ್ದು, ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ ಎಂದು ಉತ್ತರ ವಲಯ ಶಾಸಕರಾದ ಆಸೀಪ್ (ರಾಜು) ಸೇಠ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ನ.26) ನಗರದ ಅಂಬೇಡ್ಕರ್ ಉದ್ಯಾನವನದಲ್ಲಿ ಭಾರತದ ಸಂವಿಧಾನ ದಿನಾಚರಣೆಯಲ್ಲಿ ಅವರು ಮಾತನಾಡಿದರು.

26 ನವೆಂಬರ್ 1949 ರಂದು ಭಾರತೀಯ ಸಂವಿಧಾನವನ್ನು ಅಂಗೀಕರಿಸಲಾಯಿತು ಮತ್ತು ಸಂವಿಧಾನವನ್ನು ಅಂಗೀಕರಿಸಿದ ಈ ದಿನವನ್ನು ಸಂವಿಧಾನ ದಿನ ಎಂದು ಆಚರಣೆ ಮಾಡಲಾಗುತ್ತಿದು, ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನ, ಭಾರತದ ಸಂವಿಧಾನ ವಿಶ್ವದಲ್ಲೇ ದೊಡ್ಡ ಸಂವಿಧಾನವಾಗಿದೆ. ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ಅರಿತುಕೊಳ್ಳುವಂತೆ ಹೇಳಿದರು.

ಮುಂಬೈ ವಿಶ್ವ ವಿದ್ಯಾಲಯದ ನಿವೃತ್ತ ಅಧ್ಯಾಪಕರಾದ ಕೆ. ಡಿ ಮಂತ್ರೆಶಿ ಅವರು ಮಾತನಾಡಿ 26 ನವೆಂಬರ್ ಈ ದಿನ ಸಂವಿಧಾನದ ಮಹತ್ವವನ್ನು ಹರಡಲು ಮತ್ತು ಅಂಬೇಡ್ಕರ್ ಅವರ ಆಲೋಚನೆಗಳು ಮತ್ತು ವಿಚಾರಗಳನ್ನು ಹರಡಲು ಆಯ್ಕೆ ಮಾಡಲಾಗಿದೆ. ಇಂದು ಭಾರತ ದೇಶದ ವೈಭವದ ಹಾಗೂ ಪ್ರಬುದ್ಧ ದಿನವಾಗಿದ್ದು, ದೇಶ ಬದಲಾವಣೆ ಹೊಂದಲು ಸಂವಿಧಾನ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೂ ಮುಂಚೆ ಉತ್ತರ ವಲಯ ಶಾಸಕರಾದ ಆಸೀಪ್ (ರಾಜು) ಸೇಠ್, ಮಹಾನಗರ ಪಾಲಿಕೆ ಮಹಾ ಪೌರರಾದ ಸವಿತಾ ಕಾಂಬಳೆ, ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್, ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಅಂಬೇಡ್ಕರ್ ಅವರ ಉದ್ಯಾನವನದಲ್ಲಿ ಡಾ.ಬಜ.ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಪುಷ್ಪಾರ್ಪಣೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಮಹಾ ಪೌರರಾದ ಸವಿತಾ ಕಾಂಬಳೆ, ಜಿಲ್ಲಾಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಮಹಾನಗರ ಪಾಲಿಕೆಯ ಆಯುಕ್ತರಾದ ಶುಭ ಬಿ, ಮಹಾನಗರ ಮಹಾನಗರ ಪಾಲಿಕೆ ಉಪ ಆಯುಕ್ತರಾದ ಉದಯಕುಮಾರ ತಳವಾರ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಬಸವರಾಜ ಕುರಿಹೊಳಿ, ಶಿವಾಜಿ ಕಾರ್ಲೆಕರ್, ನಗರ ಸೇವಕರು ಹಾಗೂ ಸಮಾಜದ ಮುಖಂಡರುಗಳು, ಶಾಲಾ- ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದೇ ವೇಳೆ ಸಂವಿಧಾನ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button