Kannada NewsKarnataka NewsPolitics

ಸಿಎಂ ಇಬ್ರಾಹಿಂ ಅರ್ಜಿ ವಜಾ ಮಾಡಿದ ನ್ಯಾಯಾಲಯ

ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇಮಕ ಪುರಸ್ಕರಿದ ನ್ಯಾಯಾಲಯ


ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ-ಜಾತ್ಯತೀತ (ಜೆಡಿಎಸ್‌) ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಅಮಾನತು ಮಾಡಿರುವ ಕ್ರಮ ಹಾಗೂ ನೂತನ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ನೇಮಕವನ್ನು ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ಅವರ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.

ನ್ಯಾಯಾಲಯವು ಇಂದು ಇಬ್ರಾಹಿಂ ಅವರ ಅರ್ಜಿಯನ್ನು ಪುರಸ್ಕಾರ ಮಾಡಿಲ್ಲ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌.ಡಿ.ದೇವೇಗೌಡ ಅವರು ನಿಯಮಗಳಿಗೆ ವಿರುದ್ಧವಾಗಿ ತಮ್ಮನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ್ದರು ಎಂದು ಇಬ್ರಾಹಿಂ ಅವರು ದೂರಿದ್ದರು.

ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದಿಂದ ಇಬ್ರಾಹಿಂ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಉಚ್ಚಾಟನೆ ಮಾಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button