Kannada NewsKarnataka NewsLatest

*ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೇ ಮಾದರಿ: ಲಕ್ಷ್ಮೀ ಹೆಬ್ಬಾಳಕರ್* 

 *ಶ್ರೀ ಪುತ್ತಿಗೆ ಪರ್ಯಾಯೋತ್ಸವದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ* 

*ಉಡುಪಿ* : ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿ. ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ವಿದೇಶಿಯರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. 

ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಗುರುವಾರ ನಡೆದ ಶ್ರೀ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಉಡುಪಿ ಪರ್ಯಾಯ ಕಾರ್ಯಕ್ರಮ ನೋಡಿ ನಿಜಕ್ಕೂ ಬೆರಗಾದೆ. ಸಾಂಸ್ಕೃತಿಕವಾಗಿ ಸಾಕಷ್ಟು ಶ್ರೀಮಂತಿಕೆ ಹೊಂದಿದೆ ಎಂದರು.

* *ದಸರಾ ವೈಭವ ನೆನಪಿಸಿದ ಪರ್ಯಾಯ* 

ಶ್ರೀ ಪುತ್ತಿಗೆ ಪರ್ಯಾಯೋತ್ಸವದ ಅಂಗವಾಗಿ ನಡೆದ ಮೆರವಣಿಗೆ ಹಾಗೂ ಕಾರ್ಯಕ್ರಮವನ್ನು ನೋಡಿದರೆ, ಮೈಸೂರು ದಸರಾದ ವೈಭವ ನನಗೆ ನೆನಪಾಯಿತು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಇದನೆಲ್ಲಾ ನೋಡಿದರೆ ಸಾಂಸ್ಕೃತಿಕವಾಗಿ ಭಾರತ ಸಾಕಷ್ಟು ಶ್ರೀಮಂತವಾಗಿದೆ.  ಭಾರತ ಸಾಂಸ್ಕೃತಿಕವಾಗಿ ವಿಶ್ವಗುರು ಆಗುವ ಪಥದತ್ತ ಸಾಗಿದೆ ಎಂದು ಸಚಿವರು ಹೇಳಿದರು.

 *ಪರ್ಯಾಯಕ್ಕೆ ಸಂಪೂರ್ಣ ಸಹಕಾರ*

ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿದೆ. ಪರ್ಯಾಯ ಕಾರ್ಯಕ್ರಮ ಮುಗಿಯುವವರೆಗೂ ಜಿಲ್ಲಾಡಳಿತ ಸಂಪೂರ್ಣ ಸಹಕಾರವನ್ನು ನೀಡಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

* *ಪರ್ಯಾಯದಲ್ಲಿ ಭಾಗವಹಿಸಿದ್ದು ನನ್ನ ಪೂರ್ವ ಜನ್ಮದ ಪುಣ್ಯ* 

ಶ್ರೀ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಪೂರ್ವ ಅವಕಾಶವನ್ನು ಮಿಸ್ ಮಾಡಬಾರದು ಎಂಬ ಕಾರಣಕ್ಕಾಗಿ ಕುಟುಂಬ ಸಮೇತ ಆಗಮಿಸಿ  ಭಾಗವಹಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು. ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಉಡುಪಿ ಅನೇಕ ವೈಶಿಷ್ಟ್ಯಗಳಿಂದ ಕೂಡಿದೆ. ಇಂತಹ ಜಿಲ್ಲೆಗೆ ಉಸ್ತುವಾರಿ ಸಚಿವೆಯಾಗಿ ಸೇವೆ ಸಲ್ಲಿಸುವ ಸೌಭಾಗ್ಯ ನನ್ನ ಪಾಲಿಗೆ ಬಂದಿದೆ ಎಂದು ಸಚಿವರು ಹೇಳಿದರು. ಎಲ್ಲರಿಗೂ ಒಳ್ಳೆಯದಾಗಲಿ. ಕೃಷ್ಣನ ಅನುಗ್ರಹ ಎಲ್ಲರಿಗೂ ಲಭಿಸಲಿ ಎಂದು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುತ್ತೇನೆ ಎಂದರು. 

ಈ ವೇಳೆ ಪರ್ಯಾಯ ಶ್ರೀ ಕೃಷ್ಣ ಪೂಜಾ ಕೈಂಕರ್ಯ ನೇರವೇರಿಸಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ,  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ  ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ  ಶ್ರೀ ಕೃಷ್ಣನ ಭಕ್ತರು ಉಪಸ್ಥಿತರಿದ್ದರು.

ReplyForwardAdd reaction

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button