Belagavi NewsBelgaum NewsKannada NewsKarnataka NewsNationalPolitics

*ಸಿಎಂ ಬದಲಾವಣೆ ಹೇಳಿಕೆಗೆ ಶೀಘ್ರವೇ ಬೀಳಲಿದೆ ತೆರೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಕೆ.ಎನ್. ರಾಜಣ್ಣ ಅವರ ‘ಮುಂದಿನ ಸಿಎಂ ಪರಮೇಶ್ವರ್’ ಎಂಬ ಹೇಳಿಕೆಗೆ ಹೈಕಮಾಂಡ್ ಮಟ್ಟದಲ್ಲೇ ಶೀಘ್ರದಲ್ಲಿ ತೆರೆ ಬೀಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಇಂದು ನಗರದಲ್ಲಿ  ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು,  ಮಾಜಿ ಸಚಿವ ರಾಜಣ್ಣ ಅವರ ಮುಂದಿನ ಸಿಎಂ ಪರಮೇಶ್ವರ ಆಗಲಿ ಎಂಬ ಹೇಳಿಕೆಗೆ ಆದಷ್ಟು ಬೇಗ ದೆಹಲಿಯಿಂದ ಬುಲಾವಾ ಬರಲಿದ್ದು, ಈ ವಿಚಾರಗಳು ಅಲ್ಲಿ ಚರ್ಚೆಯಾಗಿ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದ ವಿಶ್ವಾಸವನ್ನು ವ್ಯಕ್ತಪಡಿಸಿದರು.

Home add -Advt

ಖಾಸಗಿ ತರಕಾರಿ ಮಾರುಕಟ್ಟೆಯವರ ಸಮಸ್ಯೆಗೆ ಸಂಬಂಧಿಸಿದಂತೆ ಇಂದು ಸಭೆಯನ್ನು ಕರೆಯಲಾಗಿದೆ. ನಾವು ಮಾರುಕಟ್ಟೆಯವರೊಂದಿಗೆ ಚರ್ಚೆ ನಡೆಸುತ್ತೇವೆ. ನಮ್ಮಿಂದ ಆದ ಸಹಾಯವನ್ನು ಮಾಡುತ್ತೇವೆ. ಎಲ್ಲದಕ್ಕೂ ಕಾನೂನು ಮೊದಲು. ಅದರಡಿ ಅನುಕೂಲವನ್ನು ಮಾಡಿಕೊಡುತ್ತೇವೆ ಎಂದು ಹೇಳಿದರು.

Related Articles

Back to top button