Latest

ಕ್ವಾರಂಟೈನ್ ಆದ ಡಿಸಿಎಂ ಲಕ್ಷ್ಮಣ ಸವದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸಚಿವರು ಕ್ವಾರಂಟೈನ್ ಆಗಿದ್ದಾರೆ.

ಈ ಕುರಿತು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಸಚಿವರ ಗನ್ ಮ್ಯಾನ್ ಹಾಗೂ ಕಾರು ಚಾಲಕನಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೇ ಉಪಚುನಾವಣಾ ಪ್ರಚಾರದಲ್ಲಿ ಸಚಿವರು ಭಾಗಿಯಾಗಿದ್ದರು. ಈ ವೇಳೆ ಹಲವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದಾರೆ.

ತಾವು ಮುಂಜಾಗೃತಾ ಕ್ರಮವಾಗಿ ಕ್ವಾರಂಟೈನ್ ಆಗಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸವದಿ ತಿಳಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್

Home add -Advt

Related Articles

Back to top button