Latest

ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್; ಆರ್ ಟಿಪಿಎಸ್ ಉದ್ಯೋಗಿ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರ್ ಟಿಪಿಎಸ್ ಉದ್ಯೋಗಿ ಓರ್ವರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಬೆಳಿಗ್ಗೆ ಕೆಲಸಕ್ಕೆಂದು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದಿದೆ. ಉದ್ಯೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಮೃತರನ್ನು ಬಸಪ್ಪ (50) ಎಂದು ಗುರುತಿಸಲಾಗಿದೆ. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button