ಪ್ರಗತಿವಾಹಿನಿ ಸುದ್ದಿ, ಕುಮಟಾ – ಆಹಾರ ಅರಸಿ ಬಂದಿದ್ದ ಚಿರತೆಯೊಂದು ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿ ತಾನೇ ಬೋನಿನಲ್ಲೇ ಬಂಧಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ನಡೆದಿದೆ.
ರಾತ್ರಿ ನಾಯಿ ಹಿಡಿಯಲು ಬಂದಿದ್ದ ಚಿರತೆ ನಾಯಿ ಬೋನಿನೊಳಗೆ ಹೋಗಿದ್ದನ್ನ ಗಮನಿಸಿದ ಮನೆಯ ಮಾಲಿಕರು ತಕ್ಷಣ ಬೋನನ್ನು ಲಾಕ್ ಮಾಡಿದ್ದಾರೆ. ಅದೃಷ್ಟವಶಾತ್ ಬೋನಿನಲ್ಲಿ ಇದ್ದ ನಾಯಿ ತಪ್ಪಿಸಿಕೊಂಡಿದೆ.
ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಚಿರತೆ ರಕ್ಷಣೆ ಮಾಡಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಾರ್ಯಾಚರಣೆಗೆ ದೊಡ್ಡ ಸವಾಲು ಎದುರಾಗಿದ್ದು ಬೋನು ಹೆಚ್ಚು ಗಟ್ಟಿ ಇಲ್ಲದ ಕಾರಣ ಚಿರತೆ ದಾಳಿ ಮಾಡುವ ಸಾಧ್ಯತೆಗಳಿದ್ದು ನುರಿತ ತಂಡ ಇದರ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ