Kannada NewsKarnataka NewsLatest

ಚುನಾವಣೆ ತಯಾರಿ ಮುಗಿದಿದೆ; ಪದಾಧಿಕಾರಿಗಳ ಜೋಡಣೆ ಕಾರ್ಯ ನಡೆದಿದೆ – ಬಿಜೆಪಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರ ಮೇಲೆ ಇಟ್ಟಿರುವ ವಿಶ್ವಾಸದಿಂದ, ಪದಾಧಿಕಾರಿಗಳ ಪರಿಶ್ರಮದಿಂದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದ ವಿಜಯ ಸಾಧಿಸುವ ಸಂಕಲ್ಪ ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಹೇಳಿದರು.
 ಬೆಳಗಾವಿ ನಗರದ ಗೋಮಟೇಶ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೆಳಗಾವಿ ಜಿಲ್ಲೆಯ ಯುವ ಮೋರ್ಚಾ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಶ್ರಮವಹಿಸಿದಾಗ ಬಿಜೆಪಿ ಅಭ್ಯರ್ಥಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಲು ಸಾಧ್ಯವಾಗಲಿದೆ. ಬೆಳಗಾವಿ ಲೋಕಸಭಾ ಅಭ್ಯರ್ಥಿ ಯಾರೇ ಆಗಲಿ ನಮಗೆ ಗೆಲುವು ಮುಖ್ಯ ಏಕೆಂದರೆ ದಿವಂಗತ ಸುರೇಶ್ ಅಂಗಡಿ ಅವರು ಸಾಕಷ್ಟು ಅನುದಾನವನ್ನು ಬೆಳಗಾವಿ ಜಿಲ್ಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ತಂದಿದ್ದಾರೆ ಅದರ ಸಮರ್ಪಕ ಅನುಷ್ಠಾನಕ್ಕೆ ಬೆಳಗಾವಿ ಲೋಕಸಭಾ ಕ್ಷೇತ್ರದ ಗೆಲುವು ಅವಶ್ಯಕವಾಗಿದೆ. ನಾವು ಪ್ರತಿಯೊಂದು ಬೂತ್ ನಲ್ಲಿ ಗೆಲುವು ಸಾಧಿಸಬೇಕು. ಚುನಾವಣೆ ತಯಾರಿ ಸಂಪೂರ್ಣವಾಗಿ ಮುಗಿದಿದ್ದು ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಜೋಡಣೆಯ ಕಾರ್ಯ ಪ್ರಗತಿಯಲ್ಲಿದೆ. ತಮಗೆ ನಿರ್ವಹಿಸುವ ಕಾರ್ಯವನ್ನು ಶಿಸ್ತುಬದ್ಧವಾಗಿ ಮಾಡಬೇಕಾಗುತ್ತದೆ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಬಂದಿರುವ ಈ ಉಪಚುನಾವಣೆಯಲ್ಲಿ ಹಿಂದೆಂದೂ ಕಾಣದ ಅಭೂತಪೂರ್ವ ಗೆಲುವನ್ನು ನಮ್ಮ ಅಭ್ಯರ್ಥಿ ಕಾಣಬೇಕು ಎಂದರು.
 ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ್ ಬಾಳಿಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಳಗಾವಿ ಗ್ರಾಮಾಂತರ ಅಧ್ಯಕ್ಷ ಸಂಜಯ್ ಪಾಟೀಲ್, ಮಹಾನಗರ ಅಧ್ಯಕ್ಷ ಶಶಿ ಪಾಟೀಲ್ ಮಾತನಾಡಿದರು.
ವೇದಿಕೆ ಮೇಲೆ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಮೋಹಿತೆ, ಸಂದೀಪ್ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷ ಯುವರಾಜ್ ಜಾದವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ್ ನೇಸರಗಿ, ಕಾರ್ಯದರ್ಶಿಗಳಾದ ಚೇತನ ಪಾಟೀಲ,  ಸುನೀಲ ಮಡ್ಡಿಮನಿ, ರಾಜ್ಯ ಕಾರ್ಯಕಾರಣಿ ಸದಸ್ಯ ಶ್ರೇಯಸ್ಸ್ ನಾಕಾಡಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ನೀತಿನ ಚೌಗಲೆ, ದೇಶನೂರ ಕಾರ್ಯಾಲಯ ಕಾರ್ಯದರ್ಶಿ ವೀರಭದ್ರಯ್ಯ ಪೂಜಾರ ಇದ್ದರು.
ಜಿಲ್ಲೆಯ ಎಲ್ಲ ಮಂಡಳದ ಯುವ ಮೊರ್ಚಾದ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button