Latest

ನಾಡಿನ ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನಾಡಿನ ಖ್ಯಾತ ಕವಿ, ಹಿರಿಯ ಸಾಹಿತಿ ಎನ್.ಎಸ್.ಲಕ್ಷ್ಮಿನಾರಾಯಣ ಭಟ್ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಬನಶಂಕರಿಯ ಮನೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದಾಗಿ ಅವರು ಇಂದು ಬೆಳಗಿನಜಾವ ಕೊನೆಯುಸಿರೆಳೆದರು. 10.30ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಸಾಹಿತ್ಯದ ಬಹುತೇಕ ಎಲ್ಲ ಪ್ರಾಕಾರಗಳಲ್ಲೂ ಕೃಷಿ ಮಾಡಿದ್ದ ಲಕ್ಷ್ಮೀ ನಾರಾಯಣ ಭಟ್ ಅವರು, ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936, ಅಕ್ಟೋಬರ್ 29ರಂದು ಜನಿಸಿದ್ದರು. 1974ರಲ್ಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.

 

Home add -Advt

Related Articles

Back to top button