Latest

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿ ; ಯಾವ ದಿನ ಯಾವ ಪರೀಕ್ಷೆ ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –  ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ  ಪರೀಕ್ಷೆ ದಿನಾಂಕ, ಅಂತಿಮ ವೇಳಾಪಟ್ಟಿ ಘೋಷಣೆ ಮಾಡಲಾಗಿದೆ.

ಪಿಯು ಬೋರ್ಡ್ ನಿಂದ ವಾರ್ಷಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ, ತಾತ್ಕಾಲಿಕ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಈಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ದಿನಾಂಕ 22-04-2022ರಿಂದ 11-05-2022ರವರೆಗೆ ನಿಗದಿಪಡಿಸಲಾಗಿತ್ತು, ಆದರೆ ಕಾಮನ್ ಲಾ ಅಡ್ಮೀಷನ್ ಟೆಸ್ಟ್ ಹಾಗು AIMA UGAT ಪರೀಕ್ಷೆ ಹಾಗು ನವೋದಯ ವಿದ್ಯಾಲಯ ಪರೀಕ್ಷೆ ನಿಗದಿಯಾಗಿರುವದರಿಂದ ಹಾಗೂ ವಿದ್ಯಾರ್ಥಿಗಳಿಂದ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಿ, ದಿನಾಂಕ 22-04-2022ರಿಂದ 18-05-2022ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ.

ದಿನಾಂಕ 22-04-2022ರಿಂದ 18-05-2022ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ದಿನಾಂಕ ಅಂತಿಮ ವೇಳಾಪಟ್ಟಿಯಾಗಿದ್ದು, ಇನ್ನೂ ಮುಂದೆ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಪಿಯು ಬೋರ್ಡ್ ತಿಳಿಸಿದೆ.

ಯಾವ ದಿನ ಯಾವ ವಿಷಯಗಳಿಗೆ ಪರೀಕ್ಷೆ

ಏಪ್ರಿಲ್​ 22 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23 ರಂದು ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏಪ್ರಿಲ್ 24 ರಂದು ರಜೆ
ಏಪ್ರಿಲ್ 25 ರಂದು ಅರ್ಥ ಶಾಸ್ತ್ರ
ಏಪ್ರಿಲ್ 26 ರಂದು ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28 ರಂದು ಕನ್ನಡ, ಅರೇಬಿಕ್
ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮೇ 3 ರಂದು ರಜೆ
ಮೇ 4 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಎಂಡ್ ವೆಲ್‌ನೆಸ್
ಮೇ 5 ರಂದು ಇಂಗ್ಲಿಷ್
ಮೇ 10 ರಂದು ಇತಿಹಾಸ, ಭೌತಶಾಸ್ತ್ರ
ಮೇ 12 ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಮೇ 14 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮೇ 17 ರಂದು ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮೇ 18 ರಂದು ಹಿಂದಿ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ರಣರಂಗದಲ್ಲಿ ಒಂಟಿಯಾಗಿ ಸಾವಿರ ಕಿಲೋಮೀಟರ್ ಪ್ರಯಾಣಿಸಿದ ಬಾಲಕ; ತಂದೆ, ತಾಯಿ ಪುಟ್ಟ ಮಗನನ್ನು ಕಳಿಸಿದ್ದಾದರೂ ಏಕೆ? ಓದಿ ಕರುಣಾಜನಕ ಕಥೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button