Kannada NewsKarnataka NewsNationalPolitics

*ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಯಶಸ್ವಿ:‌ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ,  ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು. 

ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಸಮಾಜದ ನಿರ್ಲಕ್ಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು  ತೋರಿರುವ ಧೈರ್ಯ  ಹಾಗೂ ವಿಶೇಷವಾಗಿ ಹಿಂದುಳಿದ ವರ್ಗಗಳ ಬಗ್ಗೆ ತೋರಿರುವ ಕಾಳಜಿಗೆ ಎಐಸಿಸಿ ಒಬಿಸಿ ವಿಭಾಗದ ಸಲಹಾ ಸಮಿತಿಯು,  ನ್ಯಾಯ ಯೋಧರಾದ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳನ್ನು  ಅರ್ಪಿಸುತ್ತದೆ. ರಾಹುಲ್ ಗಾಂಧಿಯವರ ದೃಢನಿಶ್ಚಯದಿಂದಾಗಿ ಮನುವಾದಿ ಮೋದಿ ಸರ್ಕಾರವನ್ನು ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಯಾಗಿದ್ದ  ಜಾತಿ ಗಣತಿಯನ್ನು  ಭಾರತದಲ್ಲಿ ಕೈಗೊಳ್ಳುವಂತೆ ಮಾಡಿತು. ಈ ಐತಿಹಾಸಿಕ ಸಾಧನೆಗಾಗಿ ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಹೃತ್ಪೂರ್ವಕವಾಗಿ  ರಾಹುಲ್ ಗಾಂಧಿಯವರನ್ನು ಶ್ಲಾಘಿಸುತ್ತದೆ.

ಇದೊಂದು ಮೈಲಿಗಲ್ಲಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ ಹೆಜ್ಜೆ. ನ್ಯಾಯ ಯೋಧ ರಾಹುಲ್ ಗಾಂಧೀಜಿಯವರ ಅಚಲ ನಾಯಕತ್ವದಡಿಯಲ್ಲಿ, ಭಾರತವು ಅತ್ಯುನ್ನತ ಸಾಂವಿಧಾನಿಕ ಉದ್ದೇಶವಾದ ಸಾಮಾಜಿಕ ಪರಿವರ್ತನೆಯನ್ನು ಸಾಕಾರಗೊಳಿಸಲಿದೆ. ತನ್ಮೂಲಕ ನಮ್ಮ ಮಹಾನ್ ದೇಶದಲ್ಲಿ  ಸಮಸಮಾಜವನ್ನು ನಿರ್ಮಿಸಲು ಇದರಿಂದ ಸಾಧ್ಯವಾಗಲಿದೆ ಎಂದರು.

ನ್ಯಾಯ ಯೋಧರಾದ ರಾಹುಲ್ ಗಾಂಧಿಜಿಯವರ ಧೀರ ಮತ್ತು ನಿರ್ಭಯ ನಾಯಕತ್ವದಡಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಹಿಡಿದು ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಲು ನಿರ್ಧರಿಸಿ, ಹೋರಾಡಲು ನಾವೆಲ್ಲರೂ ಪ್ರಮಾಣ ಮಾಡುತ್ತೇವೆ ಎಂದರು.

Home add -Advt

ರಾಷ್ಟ್ರೀಯ ಆಂದೋಲನ

ಭಾರತೀಯ ಜನಗಣತಿ ಆಯೋಗ, ಅಧಿಕೃತವಾಗಿ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು, ಭಾರತ (ಒಆರ್‌ಜಿಐ) ಇವರ ವತಿಯಿಂದ   ರಾಷ್ಟ್ರ ಮಟ್ಟದ ಜಾತಿ ಗಣತಿ ಕೈಗೊಳ್ಳುವುದು. ಜನಗಣತಿಯು ಪ್ರತಿ ಜಾತಿ ಮತ್ತು ವ್ಯಕ್ತಿಯ  ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಅಂಶಗಳನ್ನು ಒಳಗೊಂಡಿರಬೇಕು ಮತ್ತು ತೆಲಂಗಾಣ ರಾಜ್ಯದ ಸೀಪ್ (SEEEP Caste  Survey) ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ಇಟ್ಟುಕೊಳ್ಳಬೇಕು.

ಮೀಸಲಾತಿಯನ್ನು ನೀಡಲು ಶೇ 50 ರಷ್ಟಿರುವ ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಆರ್ಥಿಕ, ರಾಜಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಸೂಕ್ತ  ಮೀಸಲಾತಿಯನ್ನು ಒದಗಿಸಬೇಕು.

ಸಂವಿಧಾನದ ಅನುಚ್ಛೇಧ 15(5) ರ ಪ್ರಕಾರ  ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ನೀಡಬೇಕು.

ವರದಿಯನ್ನು ಸ್ವೀಕರಿಸದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ

2015 ನೇ ಇಸವಿಯಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಕೈಗೊಳ್ಳಲು ಹಿಂದುಳಿದ ವರ್ಗದ ಆಯೋಗಕ್ಕೆ ಆದೇಶ ನೀಡಲಾಗಿತ್ತು. ಕೇವಲ ಹಿಂದುಳಿದ ವರ್ಗವಲ್ಲದೇ ಎಲ್ಲ ಜನರನ್ನು ಸಮೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದ್ದು, ಆಯೋಗವು ಸಮೀಕ್ಷೆಯನ್ನು ನಡೆಸಿತು. 2018 ರಲ್ಲಿ ಸಮ್ಮಿಶ್ರ ಸರ್ಕಾರದ ಅಧಿಕಾರಕ್ಕೆ ಬಂದಾಗ, ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರು ವರದಿಯನ್ನು ನೀಡಲು ಕಾಲಾವಕಾಶ ನೀಡುವಂತೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಕೋರಿದರು. 

ಆಯೋಗದ ಕೋರಿಕೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಮನ್ನಿಸಲಿಲ್ಲ. ಅಂದು ಸಚಿವರಾಗಿದ್ದ ಪುಟ್ಟರಂಗ ಶೆಟ್ಟಿಯವರು ಆಯೋಗಕ್ಕೆ ಕಾಲಾವಕಾಶವನ್ನು ನೀಡಿದರೂ, ವರದಿಯನ್ನು ಸ್ವೀಕರಿಸದಂತೆ ಸಚಿವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೂಚನೆ ನೀಡಿದ್ದರ ಬಗ್ಗೆ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಜಾತಿಗಣತಿಯನ್ನು ಕೈಗೊಂಡ ಮೊದಲ ರಾಜ್ಯ ಕರ್ನಾಟಕ

ಸಮ್ಮಿಶ್ರ ಸರ್ಕಾರದಲ್ಲಿ ನಂತರದ ಮೂರು ವರ್ಷ,  ಹತ್ತು ತಿಂಗಳು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ಆಯೋಗದ ವರದಿಯನ್ನು ಸ್ವೀಕರಿಸುವುದಾಗಲಿ, ಜಾರಿ ಮಾಡುವ ಬಗ್ಗೆಯಾಗಲಿ ಕೈಹಾಕಲಿಲ್ಲ. ನಂತರದ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಗಡೆಯವರು ಶಿಫಾರಸ್ಸುಗಳನ್ನು ಮಾಡಿ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿದರು. ಈ ವರದಿಯನ್ನು ನಮ್ಮ ಸಚಿವ ಸಂಪುಟದಲ್ಲಿ ಮಂಡಸಿ ಚರ್ಚಿಸಿದಾಗ, ಸದರಿ ವರದಿಯು ಹತ್ತು ವರ್ಷದ ಹಿಂದಿನ ಸಮೀಕ್ಷೆಯನ್ನು ಆಧರಿಸಿರುವುದರಿಂದ ಪುನ: ಸಮೀಕ್ಷೆ ಮಾಡುವ  ನಿರ್ಣಯವನ್ನು ಸಚಿವ ಸಂಪುಟ ಕೈಗೊಂಡಿದೆ.  ಸಚಿವ ಸಂಪುಟದ ನಿರ್ಣಯದಂತೆ ಹಿಂದುಳಿದ ವರ್ಗದ ಆಯೋಗಕ್ಕೆ ಮೂರು ತಿಂಗಳ ಕಾಲಾವಕಾಶದಲ್ಲಿ ಮರುಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಆಯೋಗವು ನೀಡಿದ ವರದಿಯನ್ನು ಜಾರಿ ಮಾಡಲಾಗುವುದು ಎಂದು ವಿವರಿಸಿದರು. 1931 ರ ನಂತರ ಜಾತಿ ಜನಗಣತಿಯನ್ನು ಕೈಗೊಂಡ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದಲೇ ಅದನ್ನು ‘ಕರ್ನಾಟಕ ಮಾದರಿ’ ಎಂದು ಕರೆಯಲಾಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಎಂದೆಂದಿಗೂ ಸಂವಿಧಾನಕ್ಕೆ ಬದ್ಧ

ಕಾಂಗ್ರೆಸ್ ಪಕ್ಷ ಎಂದೆಂದಿಗೂ ಸಂವಿಧಾನಕ್ಕೆ ಬದ್ಧವಾಗಿರುತ್ತದೆ. ಅಹಿಂದ ತತ್ವವು ಎಲ್ಲರಿಗೂ ಸಮಪಾಲು, ಸಮಬಾಳು ಎಂಬುದರ ಆಧಾರವಾಗಿದೆ. ಇಂದಿನ ಕಾಲಮಾನದಲ್ಲಿ ಸಾಮಾಜಿಕ , ಆರ್ಥಿಕ, ಶೈಕ್ಷಣಿಕವಾಗಿ ಸಮಾನತೆ ಇಲ್ಲವಾಗಿದ್ದು, ಈ ನಿಟ್ಟಿನಲ್ಲಿ ಹಿಂದುಳಿದ ಸಮುದಾಯಗಳಿಗೆ ಶಕ್ತಿ ತುಂಬಬೇಕಾಗಿದೆ. ನ್ಯಾಯಯೋಧ ರಾಹುಲ್ ಗಾಂಧಿಯವರು ಪ್ರತಿಪಾದಿಸುತ್ತಿರುವ ಜಾತಿಗಣತಿ ಕೇವಲ ಜಾತಿಗಳ ಗಣತಿಯಾಗಿರದೇ, ಅದು ಸಾಮಾಜಿಕ , ಆರ್ಥಿಕ, ಶೈಕ್ಷಣಿಕವಾಗಿ ನಡೆಸುವ ಸಮೀಕ್ಷೆಯಾಗಿದೆ.  ಹಿಂದುಳಿದ ಸಮುದಾಯಗಳಿಗೆ ಸಮಾನ ಅವಕಾಶ ಒದಗಿಸುವ ದಿಟ್ಟ ನಿರ್ಧಾರವನ್ನು ಶ್ರೀ ರಾಹುಲ್ ಗಾಂಧಿಯವರು  ಕೈಗೊಂಡಿದ್ದಾರೆ ಎಂದರು.

ಕಾಂಗ್ರೆಸ್ ಅಹಿಂದ ಪರ: ನಾವೆಲ್ಲಾ ಸಿದ್ದರಾಮಯ್ಯ ಅವರ ಪರವಾಗಿದ್ದೇವೆ: ಡಾ. ಅನಿಲ್ ಜೈ ಹಿಂದ್

ಕಾಂಗ್ರೆಸ್ ನಲ್ಲಿ ಹಿಂದುಳಿದ ವರ್ಗದ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದಾರೆ. ಕಾಂಗ್ರೆಸ್ ಇವರನ್ನು ಬದಲಾಯಿಸುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ , AICC ಒಬಿಸಿ ವಿಭಾಗದ ಅಧ್ಯಕ್ಷ ಡಾ.ಅನಿಲ್ ಜೈಹಿಂದ್, ಆ ರೀತಿಯ ಯಾವ ಪ್ರಸ್ತಾಪವೂ ಇಲ್ಲ. ನಾವೆಲ್ಲಾ ಸಿದ್ದರಾಮಯ್ಯ ಅವರ ಪರವಾಗಿ ಇದ್ದೇವೆ ಎಂದು ಸ್ಪಷ್ಟಪಡಿಸಿದರು.

First AICC OBC Advisory Committee Meeting Highly Successful: CM Siddaramaiah*

CM Congratulates Rahul Gandhi for His Unwavering Commitment to Social Justice

Bengaluru: Chief Minister Siddaramaiah described the first meeting of the AICC All India OBC Advisory Committee as highly successful and praised Rahul Gandhi, a champion of justice, for his courage and commitment to social justice.

Speaking to the media after the meeting, CM Siddaramaiah read out the Bengaluru Declaration from the first meeting:

The AICC OBC Advisory Committee expresses gratitude to Rahul Gandhi, a warrior for justice, for his courage in ensuring social justice for neglected sections of society and his special concern for backward classes. Due to Rahul Gandhi’s resolute determination, the Manuvadi Modi government was compelled to conduct a caste census in India, a just and constitutional demand. The committee wholeheartedly commends Rahul Gandhi for this historic achievement on behalf of all backward classes in India.

While this is a milestone, it is a small step toward ensuring social justice as envisioned by the Constitution. Under the steadfast leadership of Rahul Gandhi, India will realize the highest constitutional goal of social transformation, paving the way for building an equitable society in our great nation.

Under the bold and fearless leadership of Rahul Gandhi, we pledge to uphold the Congress party’s flag and fight to secure social justice for all.

Resolutions:

  1. A nationwide caste census should be conducted by the Registrar General and Census Commissioner, India (ORGI). The census must include social, economic, educational, employment, and political aspects of every caste and individual, using Telangana’s SEEEP Caste Survey as a model.
  2. The 50% cap on reservations should be relaxed to provide adequate reservations for backward classes in education, economy, politics, and other fields.
  3. Reservations should be implemented in private educational institutions as per Article 15(5) of the Constitution.

Former CM H.D. Kumaraswamy’s Instructions to Reject Report:

CM Siddaramaiah revealed that in 2015, during his tenure as Chief Minister, he had ordered the Backward Classes Commission to conduct a socio-economic and educational survey covering all communities, not just backward classes. The commission conducted the survey, but in 2018, under the coalition government, the then-commission chairman Kantharaju requested more time to submit the report. Former CM H.D. Kumaraswamy rejected the request. Despite Minister Puttaranga Shetty granting an extension, Kumaraswamy instructed the minister not to accept the report, Siddaramaiah disclosed.
Karnataka: First State to Conduct Caste Census: Siddaramaiah noted that Karnataka was the first state to conduct a caste census since 1931, earning it the title of the “Karnataka Model.” He added that during the subsequent three years and ten months of the BJP government, no action was taken to accept or implement the commission’s report. Later, under Backward Classes Commission Chairman Jayaprakash Hegde, a report with recommendations was prepared and submitted. However, as it was based on a decade-old survey, the state cabinet decided to conduct a fresh survey. The Backward Classes Commission has been directed to complete the re-survey and submit a report within three months, which will then be implemented.
Congress Committed to the Constitution: Siddaramaiah emphasized that the Congress party is always committed to the Constitution. The AHINDA (Minorities, Backward Classes, and Dalits) philosophy is rooted in equal opportunity and justice for all. He highlighted the lack of social, economic, and educational equality today, stressing the need to empower backward communities. He praised Rahul Gandhi’s advocacy for a caste census, clarifying that it is not just a count of castes but a comprehensive socio-economic and educational survey aimed at providing equal opportunities to backward communities.

Congress Backs AHINDA, Supports Siddaramaiah: Dr. Anil Jai Hind Responding to a journalist’s question about whether Congress plans to replace Siddaramaiah, the only backward-class Chief Minister in the party, AICC OBC Department Chairman Dr. Anil Jai Hind clarified, “There is no such proposal. We all stand with Siddaramaiah.”

Related Articles

Back to top button