Cancer Hospital 2
Beereshwara 33
LaxmiTai 5

ಎಸ್ ಆರ್ ಬೊಮ್ಮಾಯಿ 100 ನೇ ಜನ್ಮ ದಿನಾಚರಣೆ: ನಮನ ಸಲ್ಲಿಸಿದ ಬಸವರಾಜ ಬೊಮ್ಮಾಯಿ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ದೇಶ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಎಸ್ ಆರ್. ಬೊಮ್ಮಾಯಿಯವರ ಜನ್ಮ ಶತಮಾನೋತ್ಸವದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಅವರಿಗೆ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಪೂಜ್ಯ ತಂದೆಯವರಾದ ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಅವರ 100 ನೇ ಜನ್ಮದಿನಾಚರಣೆಯ ದಿನದಂದು ಅವರಿಗೆ ಅನಂತ  ಪ್ರಣಾಮಗಳನ್ನು ಸಲ್ಲಿಸುತ್ತೇನೆ. 

ಜನಸೇವಾ ತತ್ಪರರಾಗಿ ಅವರು ಪ್ರತಿಪಾದಿಸಿದ ಮೌಲ್ಯಗಳು, ಅವರ ಜೀವನ, ಅವರು ತೋರಿದ ದಾರಿ, ಕಲಿಸಿ ಕೊಟ್ಟ ಪಾಠ ನನ್ನ ಜೀವನದ ಆಧಾರ ಮತ್ತು ಆದರ್ಶವಾಗಿದೆ ಎಂದು ತಿಳಿಸಿದ್ದಾರೆ. 

ಮುತ್ಸದ್ದಿ ರಾಜಕಾರಣಿಯಾಗಿದ್ದ ಎಸ್. ಆರ್. ಬೊಮ್ಮಾಯಿಯವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರ ವಿರುದ್ದ ನಡೆದ ಕ್ವಿಟ್ ಇಂಡಿಯಾ  ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದ ಮುಖ್ಯಮಂತ್ರಿಯಾಗಿ, ರಾಜ್ಯಸಭಾ ಸದಸ್ಯರಾಗಿ, ಕೇಂದ್ರದ ಮಾನವ ಸಂಪನ್ಮೂಲ ಸಚಿವರಾಗಿ ಕಾರ್ಯ ನಿರ್ವಹಿಸಿ ಜನಾನುರಾಗಿಯಾಗಿದ್ದರು.

Emergency Service

ಮಾಲಾರ್ಪಣೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಎಸ್. ಆರ್. ಬೊಮ್ಮಾಯಿಯವರ 100 ನೇ ವರ್ಷದ  ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ‌. ಈಶ್ವರ ಉಳ್ಳಾಗಡ್ಡಿ ಹುಬ್ಬಳ್ಳಿ ಕಿತ್ತೂರು ಚನ್ನಮ್ಮ ಸರ್ಕಲ್ ಹತ್ತಿರ ಹಳೆ ಕೋರ್ಟ್ ಬಳಿ ಇರುವ ಎಸ್. ಆರ್. ಬೊಮ್ಮಾಯಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 

ಈ ಸಂದರ್ಭದಲ್ಲಿ ಮಾಜಿ ಮೇಯರ್ ವಿಜಯಾನಂದ ಹೊಸಕೋಟಿ, ಬಿಜೆಪಿ ಮಹಾನಗರ ಪಾಲಿಕೆ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ,  ಬಾಳು ಮಗಜಿ ಗುಂಡಿ, ಲಕ್ಷ್ಮಣ್ ಉಪ್ಪಾರ್,  ಚನ್ನು ಪಾಟೀಲ್  ಹಾಗೂ  ಉಡುಪಿ ಮಂಜುನಾಥ್ ಹಾಜರಿದ್ದರು.

Bottom Add3
Bottom Ad 2