Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.

Home add -Advt

ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು, ವಿಜಯಪುರ, ಕಲಬುರ್ಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಡಗು, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒನಹವೆ ಮುಂದುವರೆಯಲಿದೆ. ಇನ್ನು ವಿಜಯಪುರದಲ್ಲಿ 13.6 ಡಿಗ್ರಿ ಸೆಲ್ಸಿಯಸ್ ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Back to top button