Belagavi NewsBelgaum NewsKannada NewsKarnataka NewsPolitics

*ಬ್ರೆಕ್ ಪಾಸ್ಟ್, ಲಂಚ್, ಡಿನ್ನರ್ ಮೀಟಿಂಗ್ ಭರಾಟೆಯಲ್ಲಿ ಆಡಳಿತವನ್ನು ಸರ್ಕಾರ ಮರೆತಿದೆ: ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಯಕತ್ವದ ಗೊಂದಲದ ನಡುವೆ ಯಾವ ಪುರುಷಾರ್ಥಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಮಾಡುತ್ತಿರಿ..? ನಾಯಕತ್ವ ಗೊಂದಲ ಬಗೆಹರಿಸಿಕೊಂಡು ಅಧಿವೇಶನ ನಡೆಸುವಂತೆ ಹೇಳಿದ್ದ ನಮ್ಮ‌ ಮಾತನ್ನು ರಾಜ್ಯ ಸರ್ಕಾರ ಕೇಳಲಿಲ್ಲ. ಇಲ್ಲಿಯೂ ಡಿನ್ನರ್ ಪಾರ್ಟಿ ಮುಂದುವರಿಸಿರುವುದು ನಾಡಿನ ಜನತೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. 

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿಮ್ಮ ನಾಯಕತ್ವದ ಸಮಸ್ಯೆ ಬಗೆಹರಿಸಿಕೊಳ್ಳಿ ಅಂತಾ ನಾವು ಬೆಳಗಾವಿ ಅಧಿವೇಶನ ಆರಂಭವಾಗುವ 10 ದಿನ ಮುಂಚೆ ಬಹಳ ಸ್ಪಷ್ಟವಾಗಿ ಹೇಳಿದ್ದೇವು. ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಾಳಗ ಕೇವಲ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ ಅಲ್ಲ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳು ಅಲ್ಲ. ರಾಜ್ಯದ ಆಡಳಿತದ ಚುಕ್ಕಾಣಿ ನಡೆಸುವ ಅವರು ಇಡೀ ರಾಜ್ಯದ ಮುಖ್ಯಮಂತ್ರಿಗಳು. ಇಷ್ಟೊಂದು ಗೊಂದಲ ಇಟ್ಟುಕೊಂಡು ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುವುದು ಬೇಡ. ಅಧಿವೇಶನ‌ ಮುಂದೂಡಿ ಅಂತಾ ನಾವು ಹೇಳಿದ್ದೇವು ಎಂದು ವಾಗ್ದಾಳಿ ಮಾಡಿದರು. 

ಬ್ರೆಕ್ ಪಾಸ್ಟ್, ಲಂಚ್ ಮತ್ತು ಡಿನ್ನರ್ ಮೀಟಿಂಗ್ ಭರಾಟೆಯಲ್ಲಿ ರಾಜ್ಯ ಆಡಳಿತವನ್ನು ಸರ್ಕಾರ ಸಂಪೂರ್ಣವಾಗಿ ಮರೆತಿದೆ. ಕಳೆದ ನಾಲ್ಕು ತಿಂಗಳಿನಿಂದ ಪದೇ ಪದೇ ಡಿನ್ನರ್ ಮೀಟಿಂಗ್ ಮಾಡಿಕೊಂಡು ಬಂದಿದ್ದಾರೆ. ಇದರ ಕಾರಣದಿಂದಲೇ ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ ಹೋಯಿತು‌ ಎಂದು ವಿಜಯೇಂದ್ರ ದೂರಿದರು. 

ರಾಜ್ಯದ ಜನರ ಸಮಸ್ಯೆಗಳ ಕುರಿತು ಚಿಂತನೆ ಮಾಡಲು ಈ ಸರ್ಕಾರ ಸಮಯ ಕೊಡಲಿಲ್ಲ. ಡಿನ್ನರ್, ಲಂಚ್ ಮೀಟಿಂಗ್ ನಲ್ಲಿ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತಾರೆ ಅಂದರೆ ಅದು ಇಲ್ಲ. ಕೇವಲ ತಮ್ಮ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಕೆಲವರು ಮೀಟಿಂಗ್ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ ನೇತೃತ್ವದ ತಂಡವು ಹೇಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು‌ ಕುರ್ಚಿಯಿಂದ ಹೇಗೆ ಬೀಳಿಸಬೇಕು ಅಂತಾ ತಂತ್ರಗಾರಿಕೆ ರೂಪಿಸಲು ಮೀಟಿಂಗ್ ಮಾಡುತ್ತಿದೆ. ಇದರ ನಡುವೆ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು. ರೈತರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.

Home add -Advt

Related Articles

Back to top button