
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಲೊಲೆ ಮಾಡಿರುವ ಘಟನೆ ನಡೆದಿದೆ
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ಮಧ್ಯರಾತ್ರಿ ವೇಳೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ