
ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಈಶ್ವರ ನಗರದಲ್ಲಿರುವ ವೈಷ್ಣವಿ ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ. ಘಟನೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ.
ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಕೊಲೆಯಾದ ಅರ್ಚಕ. ದುಷ್ಕರ್ಮಿಗಳು ಚಾಕುವಿನಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಅರ್ಚಕನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು. ಅದೃಷ್ಟವಶಾತ್ ಆ ಸಮಯದಲ್ಲಿ ಅರ್ಚಕ ಬದುಕುಳಿದಿದ್ದರು ಎನ್ನಲಾಗಿದೆ. ಇಲ್ಲಿನ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಈಗಾಗಲೇ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ