Belagavi NewsBelgaum NewsKarnataka NewsLatest
*ಆಸ್ಪತ್ರೆಯಲ್ಲಿ ಕಿತ್ತಾಡಿಕೊಳ್ಳುತ್ತಿದ್ದ ಡಾಕ್ಟರ್ಸ್ ಗೆ ಶಾಕ್ ನೀಡಿದ ಆರೋಗ್ಯ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರಿಬ್ಬರ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಡಾ. ಜಯಲಕ್ಷ್ಮಿ ಮುಸಾಳೆ ಹಾಗೂ ಡಾ. ಕಮಲಾ ಕುಳಗೇರಿ ಇಬ್ಬರನ್ನು ಅಮಾನತು ಮಾಡಿ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಕೆ.ಬಿ ಆದೇಶ ಹೊರಡಿಸಿದ್ದಾರೆ.
ಮಾಧ್ಯಮಗಳಲ್ಲಿ ವರದಿ ಬೆನ್ನಲ್ಲೇ 4 ತಂಡ ರಚಿಸಿ ತನಿಖೆ ನಡೆಸಿದ್ದ ಆರೋಗ್ಯ ಇಲಾಖೆ ತನಿಖಾ ವರದಿಯಲ್ಲೂ ಇಬ್ಬರು ವೈದ್ಯರು ಕರ್ತವ್ಯ ಲೋಪ ಸಾಬೀತು ಆದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.
ಇಬ್ಬರು ವೈದ್ಯರಿದ್ದರು ಗರ್ಭಿಣಿಯರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿರಲಿಲ್ಲ. ಒಬ್ಬರು ನೋಡಿದ ಗರ್ಭಿಣಿಯನ್ನ ಇನ್ನೊಬ್ಬರು ನೋಡುತ್ತಿರಲಿಲ್ಲ.
ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿದ್ದ ಆರೋಗ್ಯ ಇಲಾಖೆ ಈ ಆದೇಶ ಹೊರಡಿಸಿದೆ.