National

*ಮುಖ್ಯ ಚುನಾವಣಾ ಆಯುಕ್ತ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾ‌ರ್ ಮತ್ತು ಉತ್ತರಾಖಂಡದ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ವಿಜಯ್ ಕುಮಾರ್ ಜೋಗ್ಲಂಡ್ ಅವರಿದ್ದ ಹೆಲಿಕಾಪ್ಟರ್ ಬುಧವಾರ ಪಿಥೋರಗಢ ಜಿಲ್ಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಘಟನೆಗೆ ಸಂಬಂಧಿಸಿ ಉತ್ತರಾಖಂಡ ಸರ್ಕಾರ ಪ್ರತಿಕ್ರಿಯಿಸಿ, ಹೆಲಿಕಾಪ್ಟರ್‌ನಲ್ಲಿರುವ ಎಲ್ಲಾ ಜನರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ. ಹೆಲಿಕಾಪ್ಟರ್‌ನಲ್ಲಿ ರಾಜೀವ್ ಕುಮಾರ್ ಹಾಗೂ ವಿಜಯ್ ಕುಮಾರ್ ಜೋಗ್ಲಂಡ್ ಮುನ್ಸಿಯಾರಿಗೆ ತೆರಳುತ್ತಿದ್ದರು. ಹವಮಾನ ವೈಪರಿತ್ಯದಿಂದಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ.

Home add -Advt

ಮುಖ್ಯ ಚುನಾವಣಾ ಆಯುಕ್ತರು ನಿನ್ನೆ ನವದೆಹಲಿಯಲ್ಲಿ ನಡೆಸ ಪತ್ರಿಕಾಗೋಷ್ಠಿಯಲ್ಲಿ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದರು.

Related Articles

Back to top button