Karnataka NewsLatest

*ವಿಶ್ವ ಒಕ್ಕಲಿಗರ ಸಂಸ್ಥಾನದ ಜಗದ್ಗುರು ಇನಿಲ್ಲ*

ಪ್ರಗತಿವಾಹಿನಿ ಸುದ್ದಿ: ವಿಶ್ವ ಒಕ್ಕಲಿಗರ ಸಂಸ್ಥಾನದ ಜಗದ್ಗುರು ಚಂದ್ರಶೇಖರ ಸ್ವಾಮೀಜಿ  ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ನಿಧನರಾಗಿದ್ದಾರೆ.

ಕೆಂಗೇರಿಯ ಬಳಿಯಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಹಲವು ಮಠಾಧೀಶರು, ಚಿತ್ರನಟರು, ರಾಜಕೀಯ ಗಣ್ಯರು ಬಂದು ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಪ್ರಾರಂಭಿಸಿದ್ದಾರೆ. 

ಇಂದು ಶ್ರೀ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾ‌ರ್, ಎಚ್. ಡಿ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ರಾಜಕೀಯ ಗಣ್ಯರು ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ ಮೂರು ಗಂಟೆಗೆ ಧಾರ್ಮಿಕ ಮುಖಂಡರು ಹಾಗೂ ಇತರೆ ಮಠಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ಶ್ರೀಗಳ ಅಂತಿಮ ಸಂಸ್ಕಾರ ನೆರವೇರಲಿದೆ. ಕಿರಿಯ ಸ್ವಾಮಿಗಳಾಗಿರುವ ನಿಶ್ಚಲಾನಂದ ಸ್ವಾಮೀಜಿ ಅವರು ಚಂದ್ರಶೇಖರ ಸ್ವಾಮೀಜಿಯವರ ಅಂತಿಮ ವಿಧಿಗಳನ್ನು ನೆರವೇರಿಸಲಿದ್ದಾರೆ.

ವಿಶ್ವ ಒಕ್ಕಲಿಗ ಮಠವು ಶಿಕ್ಷಣ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಮಾಡಿರುವ ಸೇವೆಯಿಂದ ಪ್ರಸಿದ್ಧವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button