Latest

ಅಯೋಧ್ಯಾ ತೀರ್ಪಿಗೆ ಕೆಲವೇ ಕ್ಷಣ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಐತಿಹಾಸಿಕ ಅಯೋಧ್ಯಾ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ತೀರ್ಪು ಹೊರಬರಲು ಇನ್ನು ಕೆ ಈಗಾಗಲೆ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯಕ್ಕೆ ಆಗಮಿಸಿದ್ದು, ಎಲ್ಲ ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಲವೇ ಕ್ಷಣವಿದೆ. ಈಗಾಗಲೆ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯಕ್ಕೆ ಆಗಮಿಸಿದ್ದು, ಎಲ್ಲ ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಅಯೋಧ್ಯಾ ತೀರ್ಪು ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಹಿರಿಯ ನಾಯಕರ ಸಭೆ ನಡೆಸಿವೆ. ಹಿರಿಯ ಪೊಲೀಸ್ ಅಧಿಕಾರಿಗಳೂ ನಿರಂತರ ಸಭೆ ನಡೆಸಿ ಭದ್ರತೆ ಪರಿಶೀಲಿಸುತ್ತಿದ್ದಾರೆ. ಸುಪ್ರಿಂ ಕೋರ್ಟ್ ಕೂಡ ಭದ್ರತೆಯ ವಿವರ ಪಡೆದುಕೊಂಡಿದೆ. ಕೇಂದ್ರ ಗೃಹ ಇಲಾಖೆ ಕೂಡ ನಿರಂತರ ಮಾಹಿತಿ ಪಡೆದುಕೊಳ್ಳುತ್ತಿದೆ.ಯಾವುದೇ ಹೇಳಿಕೆಗಳನ್ನು ನೀಡದಂತೆ ಎಲ್ಲ ಪಕ್ಷಗಳೂ ತಮ್ಮ ನಾಯಕರುಗಳಿಗೆ ಕಟ್ಟಪ್ಪಣೆ ಮಾಡಿವೆ.

ದೇಶದ ಬಹುತೇಕ ರಾಜ್ಯಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ತಾತ್ಕಾಲಿಕವಾಗಿ 20 ಜೈಲುಗಳನ್ನು ಸಿದ್ದಪಡಿಸಲಾಗಿದೆ. ಅನೇಕ ಕಡೆ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ. 10.30ಕ್ಕೆ ಹೊರಬೀಳುವ ತೀರ್ಪಿಗಾಗಿ ಇಡೀ ದೇಶವೇ ಕಾಯುತ್ತಿದೆ. ಎಲ್ಲರೂ ತುಗಾಲಮೇಲೆ ನಿಲ್ಲುವಂತಾಗಿದೆ. ಸುಪ್ರಿಂ ಕೋರ್ಟ್ ಹಾಲ್ ಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಕೇವಲ ಕೋರ್ಟ್ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಮಾತ್ರ ಪ್ರವೇಶ ನೀಡಲಾಗಿದೆ. ದೆಹಲಿಯ ಎಲ್ಲೆಡೆ ಕಟ್ಟುನಿಟ್ಟಿನ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಯೋಧ್ಯೆ ಪ್ರಕರಣದ ಸಂಪೂರ್ಣ ಇತಿಹಾಸ ಇಲ್ಲಿದೆ

Home add -Advt

ಶನಿವಾರ ರಾಜ್ಯಾದ್ಯಂತ ಶಾಲೆ, ಕಾಲೇಜಿಗೆ ರಜೆ -ಸಚಿವ ಸುರೇಶ ಕುಮಾರ

ನಾಳೆಯೇ ಅಯೋಧ್ಯಾ ತೀರ್ಪು -Big Breaking

Related Articles

Back to top button