ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಾಲಿವುಡ್ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆಗೆ ರಾಜ್ಯದ ಸಚಿವರು, ಶಾಸಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ವಿಧಾನಸಭೆಯ ಕಲಾಪದ ವೇಳೆ ಈ ವಿಚಾರ ತಿಳಿಸಿದ ಸ್ಪೀಕರ್ ಕಾಗೇರಿ, ನಾಳೆ ಮಾರ್ಚ್ 15ರಂದು ಸಂಜೆ 6:45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್ ನ ಸ್ಕ್ರೀನ್ ನಂ.6ರಲ್ಲಿ ಎಲ್ಲಾ ಸಚಿವರು, ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದರು.
ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಈ ಚಿತ್ರ ವೀಕ್ಷಿಸಿದ್ದು, ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು ಎಂದು ಹೇಳಿದರು.
ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಕೆಲ ಸಚಿವರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಿಸಿದ್ದರು. ಸಿನಿಮಾ ಬಗ್ಗೆ ಮಾತನಾಡಿದ್ದ ಸಿಎಂ, ತಕ್ಷಣ ಪ್ರತಿಕ್ರಿಯೆ ಸಾಧ್ಯವಾಗುತ್ತಿಲ್ಲ, ಚಿತ್ರ ನೋಡಿ ಭಾವುಕನಾಗಿದ್ದೇನೆ. ಕಾಶ್ಮೀರಿ ಪಂಡಿತರ ಮೇಲೆ ನಡೆದ ದಾಳಿ ಬಗ್ಗೆ ಚಿತ್ರದಲ್ಲಿ ತೋರಿಸಲಾಗಿದೆ ಎಂದು ಹೇಳಿದ್ದಾರೆ.
ತಾಜ್ ವೆಸ್ಟ್ ಎಂಡ್ ನಲ್ಲಿ ಕುಮಾರಸ್ವಾಮಿ ರಾಸಲೀಲೆ; ಸಿ.ಪಿಯೋಗೇಶ್ವರ್ ಗಂಭೀರ ಆರೋಪ
ವಾಲ್ಮೀಕಿ ಪೀಠದ ಶ್ರೀಗಳ ಹೋರಾಟಕ್ಕೆ ಸ್ಪಂದಿಸದಿದ್ದರೆ ಉಗ್ರ ಹೋರಾಟ: ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ