Kannada NewsKarnataka NewsNationalPoliticsTravel

*ರಾಜ್ಯದ ಕೊ‌ನೆಯ ನಕ್ಸಲ್ ಮಹಿಳೆ ಇಂದು ಶರಣಾಗತಿ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಸರಣಿ ಮುಂದುವರಿದಿದೆ.ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಕ್ಷ್ಮೀ ಉಡುಪಿ ಇವತ್ತು ಚಿಕ್ಕಮಗಳೂರಿನಲ್ಲಿ ಶರಣಾಗುವ ಮೂಲಕ ಕರ್ನಾಟಕದಲ್ಲಿ ಮುಖ್ಯ ವಾಹಿನಿಗೆ ಬರಲಿದ್ದಾಳೆ.

ಲಕ್ಷ್ಮೀ ಮೇಲೆ ಶಂಕರನಾರಾಯಣ ಹಾಗೂ ಅಮಾಸೆಬೈಲ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳಿವೆ. ಇದನ್ನು ಹೊರತುಪಡಿಸಿ ಬೇರೆಲ್ಲೂ ಇವಳ ಮೇಲೆ ಪ್ರಕರಣ ಇಲ್ಲ ಎಂದು ತಿಳಿದು ಬಂದಿದೆ.

ಲಕ್ಷ್ಮೀ ಪ್ರಸ್ತುತ ಆಂಧ್ರ ಪ್ರದೇಶದಲ್ಲಿ ಗಂಡನ ಜತೆ ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾಳೆ. ಗಂಡ ಕೂಡ ನಕ್ಸಲ್ ಆಗಿದ್ದು ಮುಖ್ಯವಾಹಿನಿಗೆ ಬಂದಿದ್ದರು ಎಂಬ ಮಾಹಿತಿಯೂ ಇದೆ.

ಲಕ್ಷ್ಮೀ ಸುಮಾರು 15 ವರ್ಷಗಳಿಂದ ಕುಟುಂಬದವರಿಂದ ಸಂಪರ್ಕ ಕಳೆದುಕೊಂಡಿದ್ದಾಳೆ. ಭೂಗತವಾಗಿ ನಕ್ಸಲ್ ಚಟುವಟಿಕೆಯಲ್ಲಿ ಇದ್ದಳು ಎಂಬ ಮಾಹಿತಿಯಿದೆ. ಆದರೆ ಮಂಡಗಾರು ಲತಾ, ವಿಕ್ರಂ ಗೌಡ ತಂಡದ ರೀತಿಯಲ್ಲಿ ಹಾರ್ಡ್ ಕೋರ್ ನಕ್ಸಲ್ ಆಗಿ ಲಕ್ಷ್ಮೀ ಹೆಸರು ಕೇಳಿ ಬಂದಿರಲಿಲ್ಲ. ಆಕೆ ಭೂಗತವಾಗಿದ್ದಳು ಎಂಬ ಮಾಹಿತಿ ಹೊರತುಪಡಿಸಿ ಹೆಚ್ಚಿನ ಯಾವುದೇ ಮಾಹಿತಿಯೂ ಲಭ್ಯವಿಲ್ಲ ಎಂದು ಸ್ಥಳೀಯ ಪೊಲೀಸ್ ಮೂಲಗಳು ತಿಳಿಸಿವೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button