ಪ್ರಗತಿವಾಹಿನಿ ಸುದ್ದಿ, ಕಕ್ಕೇರಿ: ಖಾನಾಪೂರ ತಾಲೂಕಿನ ವಾಟರಾ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಕಾಣಿಸಿಕೊಂಡರುವುದರಿಂದ ಗ್ರಾಮಸ್ಥರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಬೆಳಗಾವಿ -ಗೋವಾ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮದಲ್ಲಿ ಸಂಚರಿಸಿದ ಚಿರತೆ ಮನೆಯೊಂದರ ಮೆಟ್ಟಿಲು ಏರುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಲೋಂಡಾ ಗ್ರಾಮ ಸಮೀಪದ ಮೋಹಿಶೇತ ಗ್ರಾಮಪಂಚಾಯಿತಿ ವ್ಯಾಪ್ತಿಯ ವಾಟರಾ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದಷ್ಟೇ ರಾತ್ರಿ ವೇಳೆಯಲ್ಲಿ ಚಿರತೆ ಸಂಚಾರ ಮಾಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಗ್ರಾಮದಲ್ಲಿ ಸಂಚರಿಸಿದ ಸುದ್ದಿ ಎಲ್ಲೆಡೆ ಪ್ರಸಾರವಾಗಿರುವ ಹಿನ್ನೆಲೆಯಲ್ಲಿ ಭಯದ ವಾತಾವರಣ ನಿರ್ಮಿಸಿದೆ.
ಸುದ್ದಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿ ಪ್ರಶಾಂತ ಗೌರಾಣಿ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ವೇಳೆ ಗ್ರಾಮಸ್ಥರು ಹೊರಗೆ ಬರಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ