*ಬೆಳ್ಳಂ ಬೆಳಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು*
ಪ್ರಗತಿವಾಹಿನಿ ಸುದ್ದಿ: ಮಳೆ ನಡುವೆಯು ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿ, 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ತಪಾಸಣೆ ನಡೆಸಿದ್ದಾರೆ.
ಬೆಂಗಳೂರಿನಲ್ಲೆ ಆರು ಗಡೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು ಹಾಗೂ ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರಿನ ಚೇತನ್ ಕುಮಾರ್, ಕಾರ್ಮಿಕಇಲಾಖೆ ಅಧಿಕಾರಿ ಮಂಡ್ಯ ವಿಭಾಗ, ಆನಂದ್ ಸಿ ಎಲ್, ಕಮಿಷನರ್ ಮಂಗಳೂರು ಮಹಾನಗರ ಪಾಲಿಕೆ, ಮಂಜುನಾಥ್ ಟಿ ಆರ್, ಎಫ್‌ಡಿಎ ಬೆಂಗಳೂರು ನಾರ್ತ್ ಸಬ್ ಡಿವಿಷನ್ ಆಫೀಸರ್, ಬಿವಿ ರಾಜ, ಎಫ್‌ಡಿಎ, ಕೆಐಎಡಿಬಿ, ರಮೇಶ್ ಕುಮಾರ್, ಜಂಟಿ ಆಯುಕ್ತ ವಾಣಿಜ್ಯ ತೆರಿಗೆ ಇಲಾಖೆ, ಅಕ್ತರ್ ಅಲಿ, ಡೆಪ್ಯೂಟಿ ಕಂಟ್ರೋಲರ್ ಮಾಪನಾ ಇಲಾಖೆಯ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿದ್ದಪ್ಪ, ಹಿರಿಯ ಪಶು ವೈದ್ಯ ದೊಡ್ಡಬಳ್ಳಾಪುರ, ನರಸಿಂಹ ಮೂರ್ತಿ ಕೆ. ಮುನ್ಸಿಪಲ್ ಅಡ್ಮಿನಿಸ್ಟೇಷನ್ ಸರ್ವಿಸ್ ಕಮೀಷನರ್ ಹೆಬ್ಬಗೋಡಿ ಇಲಾಖೆಯ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಲಾಗಿದೆ.
ತುಮಕೂರು ಜಿಲ್ಲೆಯ ಮುದ್ದುಕುಮಾರ್ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರಿ ಆ್ಯಂಡ್ ಕಾಮರ್ಸ್ ಡಿಪಾರ್ಟೆಂಟ್, ಯಾದಗಿರಿ ಜಿಲ್ಲೆಯ ಬಲವಂತ್ ಯೋಜನ ನಿರ್ದೇಶಕ, ಯಾದಗಿರಿ ಜಿಲ್ಲಾ ಪಂಚಾಯತ್, ಶಿವಮೊಗ್ಗ ಜಿಲ್ಲೆಯ ಸಿ ನಾಗೇಶ್, ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಭದ್ರಾವತಿ ಹಾಗೂ ಡೆಪ್ಯೂಟಿ ಡೈರೆಕ್ಟರ್, ತೋಟಗಾರಿಕಾ ಇಲಾಖೆ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ